Featured

ಉಡುಪಿ: ಜು.26 ಮತ್ತು 27ರಂದು ಪ್ರಥಮ ಬಾರಿಗೆ ಸಂತೆಕಟ್ಟೆಯಲ್ಲಿ ಹಲಸು ಮೇಳ – vishwanews24

ಉಡುಪಿ: ಜು.26 ಮತ್ತು 27ರಂದು ಪ್ರಥಮ ಬಾರಿಗೆ ಸಂತೆಕಟ್ಟೆಯಲ್ಲಿ ಹಲಸು ಮೇಳ

ಉಡುಪಿ: ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಮುಖ್ಯವಾಗಿ ಆಂಧ್ರದಿಂದ ತರಿಸಲಾದ ಏಕದಶಿ, ರುದ್ರಾಕ್ಷಿ, ಕೇಸರ್, ಚಂದ್ರ ಹಲಸು ವಿಶೇಷವಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಖಾದ್ಯಗಳ ನೂರಾರು ಮಳಿಗೆಗಳಿದ್ದು, ಬಟರ್‌ಫ್ರೂಟ್, ನೇರಳೆ ಸೇರಿದಂತೆ ವಿವಿಧ ಹಣ್ಣುಗಳು ಮೇಳದ ಆಕರ್ಷಣೆಯಾಗಿವೆ ಎಂದರು.

ಕಾರ್ಯಕ್ರಮವನ್ನು ಜು.26ರಂದು ಬೆಳಗ್ಗೆ 11ಗಂಟೆಗೆ ಮೇಳವನ್ನು ಕೆಮ್ಮಣ್ಮು ಚರ್ಚಿನ ಧರ್ಮಗುರು ಉದ್ಘಾಟಿಸಲಿರುವರು. ಜು.27ರಂದು ಸಂಜೆ 5ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಉದ್ಯಮಿ ಹಾಗೂ ಕೃಷಿಕರನ್ನು ಸನ್ಮಾನಿಸಲಾಗುವುದು.

ಮೇಳದಲ್ಲಿ ಏಳು ವರ್ಷದೊಳಗಿನ ಮಕ್ಕಳು ಹಲಸು ತಿನ್ನುವ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ನಿಜಾಮುದ್ದೀನ್‌ಷ ಮುಹಮ್ಮದ್ ಯಾಸೀನ್, ಗಫೂರ್, ಮಾಶೂಕ್ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

11 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

11 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

11 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

11 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago