Featured

ಉಡುಪಿ : ಜು.27 ರಂದು ಲಸಿಕಾ ಲಭ್ಯತೆ ವಿವರ -Vishwanews24

ಉಡುಪಿ : ಜು.27 ರಂದು ಲಸಿಕಾ ಲಭ್ಯತೆ ವಿವರ -Vishwanews24

ಉಡುಪಿ : ಜಿಲ್ಲೆಯಲ್ಲಿ ಜು. 27 ರಂದು ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಕೋವಿಡ್-19 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್ ಲಸಿಕೆ ಮತ್ತು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಗಸ್ಟ್ 3 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

8 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago