ಉಡುಪಿ : ಜಿಲ್ಲೆಯಲ್ಲಿ ಜು. 28 ರಂದು ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಕೋವಿಡ್-19 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.
ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ 2 ನೇ ಡೋಸ್ ಕೋವಿಶೀಲ್ಡ್ 200 ಡೋಸ್ ಲಸಿಕೆ, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಮತ್ತು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಗಸ್ಟ್ 3 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…