Featured

ಉಡುಪಿ :  ಜೂನ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ – vishwanews24

ಉಡುಪಿ ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

      ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ಜೂನ್ 1 ರಿಂದ ಜುಲೈ 31 ವರೆಗೆ ಒಟ್ಟು 61 ದಿನಗಳ ಕಾಲ ನಿಷೇ  ಧಿಸಿದ್ದು, ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಹಾಗೂ ಹವಾಮಾನದ ವೈರ್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು.

    ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು

  ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

12 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago