ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇ ಧಿಸಿದ್ದು, ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಹಾಗೂ ಹವಾಮಾನದ ವೈರ್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು.
ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು.
ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…