Featured

ಉಡುಪಿ : ಜೂನ್ 13 ರಿಂದ 23 ರ ವರೆಗೆ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ: ತಪಾಸಣಾ ಶಿಬಿರ – Vishwanews24

ಉಡುಪಿ : ಜೂನ್ 13 ರಿಂದ 23 ರ ವರೆಗೆ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ: ತಪಾಸಣಾ ಶಿಬಿರ – Vishwanews24

 ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಯಲದ ಎ.ಡಿ.ಐ.ಪಿ ಯೋಜನೆಯಡಿ ಬೆಂಗಳೂರು ಅಲಿಮ್ಕೋ ಎ.ಸಿ.ಸಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ವ್ಯಾಪ್ತಿಯ ವಿಕಲಚೇತನರಿಗೆ ದೈನಂದಿನ ಚಟುವಟಿಕೆಗಳಿಗೆ ಪೂರಕವಾದ ಸಾಧನ ಸಲಕರಣೆಯನ್ನು ವಿತರಿಸಲು ಜೂನ್ 13 ರಿಂದ 23 ರ ವರೆಗೆ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಜೂ. 13 ರಂದು ಕಾಪುವಿನ ಜೆ.ಸಿ ಭವನ,

ಜೂ. 14 ರಂದು ಅಜ್ಜರಕಾಡು ಜಿಲ್ಲಾ ಆಸ್ಪತ್ರೆ,

ಜೂ. 15 ರಂದು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ,

ಜೂ. 16 ರಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರ,

ಜೂ. 17 ರಂದು ಕುಂದಾಪುರದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ,

ಜೂ. 18 ರಂದು ವಂಡ್ಸೆ ಸಮುದಾಯ ಆರೋಗ್ಯ ಕೇಂದ್ರ,

ಜೂ. 20 ರಂದು ನಾವುಂದ ಹಿರಿಯ ಪ್ರಾಥಮಿಕ ಶಾಲೆ,

ಜೂ. 21 ರಂದು ಹಾಲಾಡಿ ಕಿರಿಯ ಪ್ರಾಥಮಿಕ ಶಾಲೆ,

ಜೂ. 22 ರಂದು ಕಾರ್ಕಳ ತಾಲೂಕು ಆಸ್ಪತ್ರೆ ಮತ್ತು

ಜೂ. 23 ರಂದು ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ಭಾಗವಹಿಸುವ ವಿಕಲಚೇತನ ವ್ಯಕ್ತಿಗಳು ಕನಿಷ್ಟ ಶೇ. 40 ಅಂಗವೈಕಲ್ಯತೆ ಹೊಂದಿರುವ ವೈದ್ಯಕೀಯ ದೃಢಪತ್ರ, ಮಾಸಿಕ ಆದಾಯ ರೂ. 22500 ಕ್ಕಿಂತ ಕಡಿಮೆ ಇರುವ ಬಗ್ಗೆ ದೃಢಪತ್ರ ಅಥವಾ ಬಿ.ಪಿ.ಎಲ್ ಕಾರ್ಡ್, ವಿಳಾಸ ದೃಢಪತ್ರ, 2 ಪಾಸ್‌ಪೋರ್ಟ್ ಸೈಜ್ ಫೋಟೋವನ್ನು ಕಡ್ಡಾಯವಾಗಿ ತರಬೇಕು.

ವಿಕಲಚೇತನರಿಗೆ ಉಚಿತವಾಗಿ ಶ್ರವಣ ಸಾಧನ, ಕೃತಕ ಆವಯವ, ಕ್ಯಾಲಿಪರ್, ಮೊಣಕೈ ಊರುಗೋಲು, ಕಂಕುಳ ದೊಣ್ಣೆ, ರೊಲೇಟರ್, ಊರುಗೋಲು, ಗಾಲಿಕುರ್ಚಿ, ಸಿ.ಪಿ. ಗಾಲಿಕುರ್ಚಿ, ತ್ರಿಚಕ್ರ ಸೈಕಲ್, ಬ್ರೆöÊಲ್ ಕಿಟ್, ಅಂಧರಿಗೆ ಮೊಬೈಲ್ ಫೋನ್, ಸ್ಮಾರ್ಟ್ಕೇನ್, ಕುಷ್ಟರೋಗದಿಂದ ಗುಣಮುಖರಾದವರಿಗೆ ಎ.ಡಿ.ಎಲ್ ಕಿಟ್ ಮತ್ತು ಮೊಬೈಲ್ ಫೋನ್ ವಿತರಿಸಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ದೂರವಾಣಿ ಸಂಖ್ಯೆ: 0820-2574810/811ನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

11 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago