Featured

ಉಡುಪಿ : ಜೂನ್ 14ರ ಬಳಿಕ  ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ; ನೈಟ್  ಹಾಗೂ ವೀಕೆಂಡ್ ಕರ್ಪ್ಯೂ ಜಾರಿ – Vishwanews24

‏ಉಡುಪಿ : ಜೂನ್ 14ರ ಬಳಿಕ  ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ; ನೈಟ್  ಹಾಗೂ ವೀಕೆಂಡ್ ಕರ್ಪ್ಯೂ ಜಾರಿ – Vishwanews24

ಉಡುಪಿ : ಜೂನ್ 14ರ ಬಳಿಕ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಗೊಳಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಯುವುದಿಲ್ಲ, ಬದಲಾಗಿ ಸಡಿಲಿಕೆ ನೀಡಲಾಗಿದೆ. ಸಂಜೆ 7ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶನಿವಾರ, ರವಿವಾರಗಳಂದು ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರದೆ. ಶುಕ್ರವಾರ ಸಂಜೆ 7 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಉಳಿದಂತೆ ಎಲ್ಲಾ ನಿರ್ಮಾಣ ಕಾರ್ಯಗಳಿಗೆ ಅನುಮತಿ ನೀಡಲಾಗಿದ್ದು, ಸಿಮೆಂಟ್, ಸ್ಟೀಲ್ ಅಂಗಡಿ ಕಾರ್ಯಾಚರಿಸಲು ಅವಕಾಶವಿದೆ. ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗಳನ್ನು ಬಳಸಲು ಅವಕಾಶ ನೀಡಲಾಗಿದ್ದು, ಶೇ. 30ರಷ್ಟು ಸಿಬ್ಬಂದಿಗಳೊಂದಿಗೆ ಗಾರ್ಮೆಂಟ್ಸ್ ಆರಂಭಿಸಲು ಅವಕಾಶ ನೀಡಲಾಗಿದೆ.

ಆಟೋ ಟ್ಯಾಕ್ಸಿಗಳಲ್ಲಿ ಇಬ್ಬರು ಸಂಚರಿಸಲು ಅವಕಾಶ ನೀಡಲಾಗಿದೆ. ಇನ್ನು ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರಕ್ಕೆ ಜಿಲ್ಲೆಯಲ್ಲಿ ಅವಕಾಶವಿಲ್ಲ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago