Featured

ಉಡುಪಿ : ಜೂನ್ 26 ರಿಂದ ಜುಲೈ 5 ರ ವರೆಗೆ ಉಚಿತ ಮದ್ಯ ವ್ಯಸನ ವಿಮುಕ್ತಿ ಶಿಬಿರ – Vishwanews24

ಉಡುಪಿ : ಜೂನ್ 26 ರಿಂದ ಜುಲೈ 5 ರ ವರೆಗೆ ಉಚಿತ ಮದ್ಯ ವ್ಯಸನ ವಿಮುಕ್ತಿ ಶಿಬಿರ – Vishwanews24

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಹಾಗೂ ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬಯಿ ಇವರ ಸಂಯುಕ್ತ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಯೋಜನೆಯಡಿ ಜಿಲ್ಲೆಯ ಸಾರ್ವಜನಿಕರಲ್ಲಿ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜೂನ್ 26 ರಿಂದ ಜುಲೈ 5 ರ ವರೆಗೆ ಉಚಿತ ಮದ್ಯ ವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರವನ್ನು ಆಯೋಜಿಸಲಾಗುವುದು.

ಶಿಬಿರದಲ್ಲಿ 50 ಶಿಬಿರಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಮದ್ಯವ್ಯಸನದಿಂದ ವಿಮುಕ್ತಿ ಹೊಂದಲು ಇಚ್ಛಿಸುವ ಮದ್ಯವ್ಯಸನಿಗಳು ಜೂನ್ 23 ರ ಒಳಗೆ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಶಿಬಿರದಲ್ಲಿ ಶಿಬಿರಾರ್ಥಿಗಳ ದೈಹಿಕ ಸಮಸ್ಯೆಯನ್ನು ಗುರುತಿಸಿ, ಅದಕ್ಕನುಗುಣವಾಗಿ ಚಿಕಿತ್ಸೆ ನೀಡಲಾಗುವುದು ಹಾಗೂ ಮದ್ಯ ಮತ್ತು ಮಾದಕ ದ್ರವ್ಯಗಳಿಂದ ಉಂಟಾಗುವ ದುಷ್ಪರಿಣಾಮ ಹಾಗೂ ಜೀವನ ಶೈಲಿ ಬದಲಾವಣೆ ಕುರಿತು ತಜ್ಷರಿಂದ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago