ಉಡುಪಿ : ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು.
ಸಾರಿಗೆ ಕಾರ್ಯಾಚರಣೆಯ ವಿವರ :ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿoದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.
ಉಡುಪಿಯಿಂದ ಹೈದ್ರಾಬಾದ್‌ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್‌ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.
ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವAತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…