ಉಡುಪಿ : ಡಿಸೇಲ್ ಬೆಲೆ ಸೇರಿದಂತೆ ವಿವಿಧ ವೆಚ್ಚಗಳ ಏರಿಕೆಯ ಪರಿಣಾಮವಾಗಿ ಖಾಸಗಿ ಬಸ್‌ಗಳ ಟಿಕೆಟ್ ದರವನ್ನು ರಾಜ್ಯಾದ್ಯಂತ ಶೇ.5-8ರಷ್ಟು ಏರಿಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಜಲು ವಾಹನ ಬಸ್ ಮಾಲಕರ ಸಂಘಗಳ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫೆಡರೇಶನ್ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಡೀಸೆಲ್ ಬೆಲೆಯಲ್ಲಿ ತೀವ್ರ ಏರಿಕೆ ಮತ್ತು ನಿರ್ವಹಣಾ ವೆಚ್ಚದಲ್ಲಿನ ಏರಿಕೆಯಿಂದಾಗಿ ದರ ಪರಿಷ್ಕರಣೆ ಅಗತ್ಯವಾಗಿದೆ ಎಂದು ಹೇಳಿದರು.
ರಾಜ್ಯ ಸರಕಾರದ ಒಂದು ವರ್ಷದ ಹಿಂದೆ 3ರೂ. ಹಾಗೂ ಕೇಂದ್ರ ಸರಕಾರ ನಾಲ್ಕು ಬಾರಿ 8.17ರೂ. ಡಿಸೇಲ್ ದರವನ್ನು ಮತ್ತು ವಾಹನದ ಬಿಡಿಭಾಗಗಳ ದರ, ಟೈರ್-ಟೈರ್ ರಿಸೋಲಿಂಗ್ ದರ, ಟೋಲ್ ದರ, ನೌಕರರ ವೇತನ, ಸರಕಾರದ ಟ್ಯಾಕ್ಸ್, ಇನ್‌ಶ್ಯೂರೆಮನ್ಸ್ ದರ ಸೇರಿದಂತೆ ವಿವಿಧ ವೆಚ್ಚಗಳಲ್ಲಿ ತೀರಾ ಏರಿಕೆಯಾಗಿದೆ. ಈ ಪರಿಣಾಮ ಬಸ್ ಟಿಕೆಟ್ ದರವನ್ನು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟ ನಿರ್ಧರಿಸಿದೆ ಎಂದರು.
ರಾಜ್ಯ ಸರಕಾರದ ಅಧಿಸೂಚನೆ ಸಂಖ್ಯೆ ಟಿಡಿ 81 ಟಿಡಿಂ 2020ರ ಪ್ರಕಾರ ಪ್ರತಿ ಪ್ರಯಾಣಿಕರಿಗೆ 4ಪೈಸೆಯಂತೆ ಪ್ರತಿ ಕಿ.ಮೀ.ಗೆ ಕನಿಷ್ಠ 0.25ಪೈಸೆಯ ವರೆಗೆ ಸೆಸ್ ಹಾಕಲು ಅವಕಾಶ ಇದ್ದು, ಅದರ ಪ್ರಕಾರ ಹಾಲಿ ದರದ ಮೇಲೆ ಶೇ.5ರಿಂದ ಶೇ.8ರವರೆಗೆ ದರ ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ದರವು ಜೂ.8ರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಾರಿ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕರಾವಳಿ ಪ್ರದೇಶದ ಕೆಲವು ಪ್ರಮುಖ ಮಾರ್ಗಗಳಲ್ಲಿ ಪರಿಷ್ಕೃತ ದರಗಳು ಇಂತಿವೆ:
ಉಡುಪಿ – ಮಂಗಳೂರು: 95 ರಿಂದ 100 ರೂ.
ಉಡುಪಿ – ಕುಂದಾಪುರ: 60 ರಿಂದ 63 ರೂ.
ಉಡುಪಿ – ಮಣಿಪಾಲ: 12 ರಿಂದ 13 ರೂ.
ಉಡುಪಿ – ಕಾರ್ಕಳ: 58 ರಿಂದ 60 ರೂ.
ಕುಂದಾಪುರ – ಮಂಗಳೂರು: 145 ರಿಂದ 153 ರೂ.
ಕುಯಿಲಾಡಿ ಸುರೇಶ್ ನಾಯಕ್ ಮಾಹಿತಿ ನೀಡಿ, ಫೆಡರೇಶನ್ ರಾಜ್ಯಾದ್ಯಂತ ಸುಮಾರು 5,300 ಖಾಸಗಿ ಬಸ್‌ಗಳನ್ನು ಪ್ರತಿನಿಧಿಸುತ್ತದೆ. ಪರಿಷ್ಕೃತ ದರಗಳು ಹಗಲು-ಸೇವೆಯ ಹಂತದ ಕ್ಯಾರೇಜ್ ಬಸ್‌ಗಳಿಗೆ ಮಾತ್ರ ಅನ್ವಯಿಸುತ್ತವೆ ಮತ್ತು ರಾತ್ರಿ-ಸೇವೆಯ ಬಸ್‌ಗಳಿಗೆ ಅನ್ವಯಿಸುವುದಿಲ್ಲ. ಹೊಸ ದರ ರಚನೆಯ ಅಡಿಯಲ್ಲಿ ವಿದ್ಯಾರ್ಥಿಗಳ ರಿಯಾಯಿತಿಗಳು ಬದಲಾಗುವುದಿಲ್ಲ ಎಂದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ…