ಉಡುಪಿ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸಲಾಗಿದೆ.
ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆ ಈ 61 ದಿನಗಳಲ್ಲಿ ನಿಷೇಧವಾಗಲಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಹೀಗಾಗಿ ಕರಾವಳಿ ಪ್ರದೇಶದ ಮೀನುಗಾರರು ಈ ಆದೇಶವನ್ನು ಪಾಲಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…