Featured

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ

ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ ಗೋಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ 55ರ ಪಕ್ಕದಲ್ಲೇ ಸುಸಜ್ಜಿತವಾಗಿ ನಿರ್ಮಿಸಿರುವ ಅತ್ಯಾಧುನಿಕ ಹೊಸ ಕಟ್ಟಡಕ್ಕೆ ವರ್ಗಾವಣೆ ಗೊಳ್ಳಲಿದ್ದು, ಜೂನ್ 1ರಿಂದ ಕಾರ್ಯಾರಂಭ ಮಾಡಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ತಿಳಿಸಿದ್ದಾರೆ.

ನೂತನ ಆಸ್ಪತ್ರೆ ಕಟ್ಟಡದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದಕ್ಕೆ ಪೂರ್ವಭಾವಿಯಾಗಿ ಆಸ್ಪತ್ರೆಯು ಮೇ 22 ರಿಂದ 24ರವರೆಗೆ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಸಾರ್ವಜನಿಕರಿಗೆ ಮುಕ್ತ ಭೇಟಿಗೆ (ಓಪನ್ ಹೌಸ್) ಅವಕಾಶ ನೀಡಲಿದ್ದು, ಆಸ್ಪತ್ರೆಯಲ್ಲಿರುವ ಸೌಲಭ್ಯ, ಮೂಲಭೂತ ಸೌಕರ್ಯಗಳನ್ನು ಖುದ್ದಾಗಿ ವೀಕ್ಷಿಸಬಹುದಾಗಿದೆ ಎಂದವರು ತಿಳಿಸಿದರು.

1984ರಲ್ಲಿ ಉಡುಪಿ ತಾಲೂಕು ಕಚೇರಿಯ ಎದುರಿಗಿದ್ದ ಹಿಂದಿನ ಕಾನೂನು ಕಾಲೇಜು ಕಟ್ಟಡದಲ್ಲಿ ಪ್ರಾರಂಭಗೊಂಡಿದ್ದ ಡಾಟಿಎಂಎಪೈ ಆಸ್ಪತ್ರೆಯು ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಂತರ ವಿಶಾಲವಾದ ಮತ್ತು ಆಧುನಿಕ ಕ್ಯಾಂಪಸ್‌ಗೆ ಸ್ಥಳಾಂತರಗೊಳ್ಳುತ್ತಿದೆ. 1.4 ಎಕರೆ ಪ್ರದೇಶದಲ್ಲಿ ಹರಡಿರುವ ಈ ಹೊಸ ಸೌಲಭ್ಯವನ್ನು ಸುಧಾರಿತ ಮೂಲಸೌಕರ್ಯ, ಆಧುನಿಕ ವೈದ್ಯಕೀಯ ತಂತ್ರಜ್ಞಾನ ಮತ್ತು ರೋಗಿ ಸ್ನೇಹಿಸೌಲಭ್ಯಗಳೊಂದಿಗೆ ವಿನ್ಯಾಸಗೊಳಿಸಲಾಗಿದೆ ಎಂದವರು ಹೇಳಿದರು.

152 ಹಾಸಿಗೆಗಳ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಮಕ್ಕಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಕಿವಿ ಗಂಟಲು ಮೂಗು, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ನೇತ್ರಶಾಸ್ತ್ರ,ಮನೋವೈದ್ಯಶಾಸ್ತ್ರ, ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಹೆಪಾಟಾಲಜಿ, ಗ್ಯಾಸ್ಟ್ರೋ ಶಸ್ತ್ರಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಅರಿವಳಿಕೆ ಶಾಸ್ತ್ರ, ಚರ್ಮಶಾಸ್ತ್ರ, ಔದ್ಯೋಗಿಕ ಚಿಕಿತ್ಸೆ, ರೆಸ್ಪಿರೇಟರಿ ಚಿಕಿತ್ಸೆ, ದಂತ ವೈದ್ಯಶಾಸ್ತ್ರ, ಫಿಸಿಯೋಥೆರಪಿ, ವಾಕ್ ಮತ್ತು ಶ್ರವಣ ವಿಭಾಗಗಳಿವೆ ಎಂದು ಡಾ.ಶಶಿಕಿರಣ್ ವಿವರಿಸಿದರು.

ಅಲ್ಲದೇ ಹೃದ್ರೋಗ, ನರವಿಜ್ಞಾನ, ಮೂತ್ರಪಿಂಡಶಾಸ್ತ್ರ, ಸರ್ಜಿಕಲ್ ಆಂಕೊಲಾಜಿ, ವೈದ್ಯಕೀಯ ಆಂಕೊಲಾಜಿ, ನರಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ ಸಾಂಕ್ರಾಮಿಕ ರೋಗಗಳು, ಮಕ್ಕಳ ಶಸ್ತ್ರಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ರೆಸ್ಪಿರೇಟರಿ ಮೆಡಿಸಿನ್ ಮತ್ತು ಇತರ ಸೂಪರ್-ಸ್ಪೆಷಾಲಿಟಿಗಳಲ್ಲಿ ತಜ್ಞರ ಸಮಾಲೋಚನೆ ಗಳು ಸಹ ಇಲ್ಲಿ ಲಭ್ಯವಿರುತ್ತವೆ ಎಂದರು.

ಹೊಸ ಆಸ್ಪತ್ರೆಯ ಪ್ರಮುಖ ಆಕರ್ಷಣೆ ಎಂದರೆ ದಿನದ 24 ಗಂಟೆ ಕಾರ್ಯಾಚರಿಸುವ ತುರ್ತು ಚಿಕಿತ್ಸಾ ವಿಭಾಗ ಮತ್ತು ಅಪಘಾತ ಆರೈಕೆ ಕೇಂದ್ರ. ಆಸ್ಪತ್ರೆಯಲ್ಲಿ ಸುಧಾರಿತ ಲ್ಯಾಪರೊಸ್ಕೋಪಿಕ್ ವ್ಯವಸ್ಥೆಗಳೊಂದಿಗೆ ನಾಲ್ಕು ಮಾಡ್ಯುಲರ್ ಆಪರೇಷನ್ ಥಿಯೇಟರ್ಗಳು, ವಿಸ್ತೃತ 25 ಹಾಸಿಗೆಗಳ ಐಸಿಯು ಸೌಲಭ್ಯಗಳು, ಸುಧಾರಿತ ಡಯಾಲಿ ಸಿಸ್ ಕೇಂದ್ರ, ಸಿಟಿ ಸ್ಕ್ಯಾನ್, ಅಲ್ಟ್ರಾಸೌಂಡ್, xರೇ, ಪ್ರಯೋಗಾಲಯ ಮತ್ತು ಔಷಧಾಲಯ ಸೇವೆಗಳು, ವಿಶೇಷವಾಗಿ ವಿನ್ಯಾಸಗೊಳಿಸಿದ ಆರೋಗ್ಯ ತಪಾಸಣೆ ಸೌಲಭ್ಯಗಳು, ಡೇ ಕೇರ್ ಸೇವೆಗಳು ಎಂದರು.

ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆಯ ಆಡಳಿತ ಮುಖ್ಯಸ್ಥ ಮತ್ತು ಗ್ರೂಪ್ ಮ್ಯಾನೇಜರ್ ದೀಪಕ್ ಪ್ರಭು ಮಾತ ನಾಡಿ, ರೋಗಿಗಳ ಸುರಕ್ಷತೆ, ಗುಣಮಟ್ಟದ ಆರೈಕೆ, ಅವಶ್ಯ ಸೌಕರ್ಯ, ವೈದ್ಯರಿಗೆ ದಕ್ಷ ನಿರ್ವಹಣಾ ವ್ಯವಸ್ಥೆಗಳಿಗೆ ಒತ್ತು ನೀಡುವ ಮೂಲಕ ಹೊಸ ಆಸ್ಪತ್ರೆಯನ್ನು ಎಚ್ಚರಿಕೆಯಿಂದ ವಿನ್ಯಾಸಗೊಳಿಸಲಾಗಿದೆ. ನಿರ್ಣಾಯಕ ಆರೈಕೆ ಸೇವೆಗಳು, ಶಸ್ತ್ರಚಿಕಿತ್ಸಾ ಕೊಠಡಿಗಳು, ರೋಗಿಗಳ ಕಾಯುವ ಪ್ರದೇಶಗಳು, ಪಾರ್ಕಿಂಗ್ ಸೌಲಭ್ಯಗಳು ಮತ್ತು ತಡೆಗಟ್ಟುವ ಆರೋಗ್ಯ ಸೇವೆಗಳಿಗೆ ವಿಶೇಷ ಗಮನ ನೀಡಲಾಗಿದೆ. ಇಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು.

ಆಸ್ಪತ್ರೆಯು ಸುಧಾರಿತ ಮೂಲಸೌಕರ್ಯ, ಆಧುನಿಕ ಶಸ್ತ್ರಚಿಕಿತ್ಸಾ ಕೊಠಡಿಗಳು, ಅತ್ಯಾಧುನಿಕ ರೋಗನಿರ್ಣಯ ಸೌಲಭ್ಯಗಳು ಮತ್ತು ಹೆಚ್ಚು ನುರಿತ ವೈದ್ಯರ ಮೂಲಕ ಸಮಗ್ರ, ಪ್ರವೇಶಿಸ ಬಹುದಾದ, ನೈತಿಕ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.

ಸಮುದಾಯಕ್ಕೆ ಸುಲಭವಾಗಿ ಸಿಗುವ ಮತ್ತು ಕೈಗೆಟುಕುವ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿ ಸುವುದು ಆಸ್ಪತ್ರೆಯ ಪ್ರಾಥಮಿಕ ಉದ್ದೇಶವಾಗಿದೆ ಎಂದು ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ. ರಾಜಾರಾಮ್ ಪೈ ಹೇಳಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

10 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

13 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

13 hours ago