Featured

ಉಡುಪಿ : ಜೂ. 1 ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ – vishwanews24

ಉಡುಪಿ : ಜೂ. 1 ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಉಡುಪಿ: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

11 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago