Featured

ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ – vishwanews24

ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ

ಉಡುಪಿ: ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್‌ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಸೂಚನೆ ನೀಡಲಾಯಿತು.

ಬಸ್ಸಿನ ಒಳಗಿನ ಅಳವಡಿಸಲಾದ ಟೆಪ್ ರೆಕಾರ್ಡ್ ಹಾಗೂ ಸ್ಪೀಕರ್‌ಗಳನ್ನು ಕಡ್ಡಾಯವಾಗಿ ತೆಗೆದು ಹಾಕಬೇಕು. ಬಸ್ಸಿನ ಒಳಗಡೆ ಕಡ್ಡಾಯವಾಗಿ ಸಿ.ಸಿ ಕ್ಯಾಮೆರಾ ಅಳವಡಿಸಬೇಕು. ಬಸ್ಸಿನ ನಿಗದಿತ ವೇಳಾಪಟ್ಟಿಯಂತೆ ಸಮಯಕ್ಕೆ ಸರಿಯಾಗಿ ಬಸ್ಸುಗಳನ್ನು ಚಲಾಯಿಸಬೇಕು ಎಂದು ಮಾಲಕರಿಗೆ ಪೊಲೀಸ್ ಅಧಿಕಾರಿಗಳು ನಿದೇರ್ಶನ ನೀಡಿದರು.

ಕರಾವಳಿ ಜಂಕ್ಷನ್‌ನಲ್ಲಿ ಬಸ್ ನಿಲ್ದಾಣಕ್ಕೆ ಹೋಗದೇ ದಾರಿಯಲ್ಲಿ ಪಿಕ್ ಆಪ್ ಮಾಡುವುದರಿಂದ ಸಾರ್ವಜನಿಕರಿಗೆ ಮತ್ತು ಇತರ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರಿಂದ ಚಾಲಕರು ಬಸ್ಸು ನಿಲ್ದಾಣಕ್ಕೆ ಹೋಗಿ ಪಿಕ್ ಆಪ್ ಮಾಡ ಬೇಕು. ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು.

ವಿಪರೀತ ವೇಗವಾಗಿ ಬಸ್ಸುಗಳನ್ನು ಚಲಾಯಿಸದಂತೆ ಚಾಲಕರಿಗೆ ಸೂಚನೆ ನೀಡುವಂತೆ ತಿಳಿಸಲಾಯಿತು. ಬಸ್ ಚಾಲಕರು ಮೊಬೈಲ್ ಪೋನ್ ಉಪಯೋಗಿಸುತ್ತಾ ಬಸ್ಸು ಚಾಲನೆ ಮಾಡದಂತೆ ನಿರ್ದೇಶನ ನೀಡಬೇಕು. ಬಸ್ಸು ಚಾಲ ಕರು ಮದ್ಯಪಾನ ಮಾಡಿ ವಾಹನ ಚಲಾಯಿಸದಂತೆ ಕ್ರಮ ತೆಗೆದುಕೊಳ್ಳ ಬೇಕು ಎಂದು ಮಾಲಕರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಮುಂದೆ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಸಭೆಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago