Featured

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ ಜೂನ್ 28ರ ರವಿವಾರದಂದು ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ) ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ತಿಳಿಸಿದ್ದಾರೆ.

ಭಾರತವು ಕಳೆದ 14 ವರ್ಷಗಳಿಂದ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನಂತೆ ಈ ಅಭಿಯಾನವನ್ನು ನಡೆಸಲಾ ಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :

ಜೂ.28ರಂದು ಮೊದಲನೇ ದಿನ ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುತ್ತದೆ. ನಂತರದ 2ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳ ಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆ, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಂಬಂಧಪಟ್ಟವರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

4 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

4 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

5 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

6 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

9 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

9 hours ago