ಉಡುಪಿ: ಸುಮಾರು 15 ವರ್ಷಗಳ ಹಿಂದೆ ಅಂದರೆ 2011ರಲ್ಲಿ ಉಡುಪಿ ಜಿಲ್ಲಾ ಕಾರಗೃಹದ ವಾರ್ಡನ್ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ.
ಉಡುಪಿ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತನಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐದು ವರ್ಷ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.
2011ರ ಡಿಸೆಂಬರ್ 3ರಂದು ಉಡುಪಿ ಜಿಲ್ಲಾ ಕಾರಾಗೃಹದ 1 ನೇ ಬ್ಯಾರಕ್ ನ ಎದುರುಗಡೆ ವರಾಂಡದಲ್ಲಿ ಜೈಲ್ ವಾರ್ಡನ್ ಅವರು ಪ್ರಭಾರವನ್ನು ವಹಿಸಿಕೊಳ್ಳುವ ಸಲುವಾಗಿ ಬಂಧಿಗಳ ಲೆಕ್ಕವನ್ನು ತೆಗೆದುಕೊಳ್ಳಲು ಅವರವರ ಬ್ಯಾರಕ್ ಗಳಿಗೆ ಹೋಗಲು ತಿಳಿಸಿದ್ದರು. ಈ ಸಮಯದಲ್ಲಿ ಅಡಿಗೆ ಕೋಣೆಯ ಎದುರುಭಾಗದಲ್ಲಿದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್, ವಾರ್ಡನ್ ರನ್ನು ಉದ್ದೇಶಿಸಿ ‘ನಿನ್ನದು ಜಾಸ್ತಿಯಾಯಿತು ನಿನ್ನನ್ನು ಕೊಲೆ ಮಾಡುವುದಾಗಿ’ ಬೆದರಿಕೆ ಹಾಕಿದಲ್ಲದೆ ಎಡ ಕೆನ್ನೆಗೆ ಹೊಡೆದಿದ್ದ.
ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ದಸ್ತಗಿರಿ ಕ್ರಮ ಜರುಗಿಸಲಾಗಿದೆ. 2012ರ ಜನವರಿ 10ರಂದು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಲಾಗಿದೆ. 2013ರ ಮೇ 29ರಂದು ಆರೋಪಿ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
2026ರ ಏಪ್ರಿಲ್ 23ರಂದು ಆರೀಪಿ ಸಫಾನ್ ಹುಸೇನ್ ನನ್ನು ಬಾಡಿ ವಾರಂಟ್ ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆದು ಸೆ.28ರಂದು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…