Featured

ಉಡುಪಿ: ಜ್ಯುವೆಲರ್ಸ್ ಮಾಲೀಕನಿಗೆ ವಂಚಿಸಿ ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಪರಾರಿಯಾದ ಬುರ್ಕಾದಾರಿ ಮಹಿಳೆಯರು – Vishwanews24

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿಯಾದ ಬುರ್ಕಾದಾರಿ ಮಹಿಳೆಯರು

ಉಡುಪಿ, : ಉಡುಪಿಯ ಕನಕದಾಸ ರಸ್ತೆಯ ಮಾರುತಿ ಜ್ಯುವೆಲರ್ಸ್ ಮಾಲೀಕನಿಗೆ ಮೂವರು ಬುರ್ಕಾದಾರಿ ಮಹಿಳೆಯರು ವಂಚಿಸಿ ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಪರಾರಿಯದ ಘಟನೆ ಬೆಳಕಿಗೆ ಬಂದಿದೆ.

ಉಡುಪಿಯ ಕನಕದಾಸ ರಸ್ತೆಯಲ್ಲಿರುವ ಮಾರುತಿ ಜ್ಯುವೆಲರ್ಸ್ ನಲ್ಲಿ ಫೆ.18 ರಂದು ಸಮಯ ಸಂಜೆ 7:30ಕ್ಕೆ ಬಂದ ಸುಮಾರು 35 ರಿಂದ 45 ವರ್ಷ ಪ್ರಾಯದ ಮೂವರು ಬುರ್ಕಾದಾರಿ ಮಹಿಳೆಯರು ಗ್ರಾಹಕರಂತೆ ಅಂಗಡಿಗೆ ಬಂದು 15,800 ಗ್ರಾಂ ತೂಕದ ಒಂದು ಚಿನ್ನದ ಬ್ರೆಸ್ಲೆಟ್ ಖರೀದಿಸಿದ್ದು, ಇದಕ್ಕೆ ಬದಲಾಗಿ ತಮ್ಮ ಬಳಿ ಇದ್ದ 31.490ಗ್ರಾಂ ತೂಕದ ಒಂದು ನೆಕ್ಲೆಸ್ ಮತ್ತು 10.940 ಗ್ರಾಂ ತೂಕದ ಬೆಂಡೋಲೆಗೆ ಹಾಕುವ ಜುಮುಕಿ ನೀಡಿ ಮಾಲೀಕನಿಂದ 48,771/- ರೂಪಾಯಿ ಉಳಿಕೆ ಹಣದ ಪೈಕಿ 19,000/- ರೂಪಯಿಯನ್ನು ನಗದಾಗಿ ಪಡೆದು ಕೊಂಡು ಅಂಗಡಿಯಿಂದ ಸಮಯ 8:30 ಕ್ಕೆ ಹೋಗಿದ್ದು,ಮಹಿಳೆಯರು ವ್ಯವಹಾರದ ಸಮಯದಲ್ಲಿ ಚೌಕಾಶಿ ಮಾಡುವ ವೇಳೆ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಪರೀಕ್ಷೆಯ ಸಮಯ ನೀಡಿದ್ದ ಅಸಲಿ ಚಿನ್ನದ ಆಭರಣಗಳನ್ನು ಹೋಲುವ ನಕಲಿ ಚಿನ್ನಭರಣಗಳನ್ನು ಮಾಲೀಕರಿಗೆ ನೀಡಿ ವಂಚಿಸಿ ಒಟ್ಟು 1,98,923/- ಮೌಲ್ಯದ ಅಸಲಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಈ ಕುರಿತು ಮಾಲೀಕರಾದ ನಿತ್ಯಾನಂದ ಅವರು ಉಡುಪಿಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

37 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago