ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ ಹಾಗೂ ದೇಗುಲದ ಧಾರ್ಮಿಕ ಕಾರ್ಯಗಳಿಗೆಂದು ನಿರ್ಮಿಸಲಾದ ವೇದವ್ಯಾಸ ಯಾಗ ಶಾಲೆಯ ಉದ್ಘಾಟನಾ ಸಮಾರಂಭ ಜ.20 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಡಾ.ರವಿರಾಜ್ ವಿ ಆಚಾರ್ಯ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ ಅವರು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಧ್ವಜಸ್ತಂಭಕ್ಕೆ ಸಂಪೂರ್ಣ ಸಾವಯವ ಎಳ್ಳೆಣ್ಣೆ ಹಾಕುವ ಮೂಲಕ ಧ್ವಜಸ್ತಂಬಕ್ಕೆ ಚಾಲನೆ ನೀಡಿ, ಇದೀಗ ದೇಗುಲದ ಧ್ವಜಸ್ತಂಭದ (ಕೊಡಿ ಮರದ) ಪಾದುಕೆ ಶಿಲನ್ಯಾಸ ಮತ್ತು ಯಾಗ ಶಾಲೆಯನ್ನು ಜ.20 ರಂದು ಬೆಳಿಗ್ಗೆ 9 ಗಂಟೆಗೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಲೋಕಾರ್ಪಣೆ ಗೊಳಿಸಲಿದ್ದಾರೆ. ಹಾಗೂ ಧ್ವಜಸ್ತಂಭಕ್ಕೆ ಸಂಪೂರ್ಣ ತಾಮ್ರ ಮತ್ತು ಹಿತ್ತಾಳೆಯನ್ನು ಹೊದಿಸಿ ವಿಜೃಂಭಣೆಯಿಂದ ಧ್ವಜ ಪ್ರತಿಷ್ಠೆ ನಡೆಸಲಾಗುವುದೆಂದು ನಿಶ್ಚಯಿಸಲಾಗಿದ್ದು, ಮಾ.24ರಂದು ಬೆಳಿಗ್ಗೆ 7 ಗಂಟೆಗೆ ಧ್ವಜಸ್ತಂಭ ಪ್ರತಿಷ್ಠೆ ಕಲಶಾಭಿಷೇಕ, ಬೆಳಿಗ್ಗೆ 9:45 ಕ್ಕೆ ಒದಗುವ ವೃಷಭ ಲಗ್ನ ಸಮೂಹೂರ್ತದಲ್ಲಿ ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಗಂಟೆಗೆ ಹಾಲಿಟ್ಟ ಸೇವೆ, ದೂಳಿಮಂಡಲ ಸೇವೆ, ಸಣ್ಣ ರಂಗಪೂಜೆ ನಡೆಯಲಿದೆ ಎಂದು ತಿಳಿಸಿದರು.
ಇನ್ನು ಮುಂದಿನ ದಿನಗಳಲ್ಲಿ ವ್ಯಾಘ್ರ ಪಿಲಿಚಾಮುಂಡಿ ಮತ್ತು ಇತರ ಪರಿವಾರ ದೈವಗಳ ಜೀರ್ಣೋದ್ಧಾರ ಕಾಮಗಾರಿ ಶೀಘ್ರದಲ್ಲೇ ನಡೆಸಲಾಗುವುದು ಎಂದು ಅವರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
Join our Whatsapp group by clicking the below link 👇👇
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…