ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಕನ್ನಡ ನುಡಿ ಸಂಭ್ರಮ ಹಾಗೂ ದಕ್ಷ ಪೊಲೀಸ್ ಅಧಿಕಾರಿ ವಡ್ಡರ್ಸೆ ಮಧುಕರ್ ಶೆಟ್ಟಿ ಸ್ಮರಣೆ ಕಾರ್ಯಕ್ರಮ ಜ.22ರ ಬೆಳಿಗ್ಗೆ 10.30ಕ್ಕೆ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹೆಗ್ಡೆ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮಧುಕರ ಶೆಟ್ಟಿಯವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕುರ್ಮಾರಾವ್ ಪುಷ್ಪನಮನ ಸಲ್ಲಿಸಲಿದ್ದಾರೆ. ಎಸ್ ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿಪಂ ಸಿಇಒ ಪ್ರಸನ್ನ ಎಚ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅಂದು ಬೆಳಿಗ್ಗೆ 9.30ಕ್ಕೆ ಸರ್ವಿಸ್ ಬಸ್ ನಿಲ್ದಾಣದಿಂದ ಬನ್ನಂಜೆ ನಾರಾಯಣಗುರು ಮಂದಿರದವರೆಗೆ ಮೆರವಣಿಗೆ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ, ಪ್ರಮುಖರಾದ ಕುಶಲ್ ಅಮಿನ್ ಬೇಂಗ್ರೆ, ಲಕ್ಷ್ಮೀಶ್ ಶೆಟ್ಟಿ, ಸುಂದರ್ ಬಂಗೇರ, ಕೃಷ್ಣ ಪಾಂಗಾಳ, ರಾಘವೇಂದ್ರ ನಾಯಕ್, ಗೀತಾ ಪಾಂಗಾಳ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…