Featured

ಉಡುಪಿ: ಜ.30ರಂದು ಹಿರಿಯಡಕದಲ್ಲಿ “ಗಾಂಧಿ ಭಾರತ ಬೃಹತ್ ಸಮಾವೇಶ” – vishwanews24

ಉಡುಪಿ: ಜನವರಿ 30ರಂದು ಹಿರಿಯಡಕದಲ್ಲಿ ‘ಗಾಂಧಿ ಭಾರತ ಬೃಹತ್‌ ಸಮಾವೇಶ’ :- ಸ್ಪೀಕರ್‌ ಖಾದರ್ ಚಾಲನೆ

ಉಡುಪಿ: 100 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧೀಜಿ ಭಾಗವಹಿಸಿದ್ದ ಸವಿನೆನಪಿಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಕಾಪು ದಕ್ಷಿಣ ಬ್ಲ್ಯಾಕ್ ಕಾಂಗ್ರೆಸ್‌ ಸಹಯೋಗದೊಂದಿಗೆ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಧೇಯವಾಕ್ಯದಡಿ “ಗಾಂಧಿ ಭಾರತ ಬೃಹತ್ ಸಮಾವೇಶ”ವನ್ನು ಜನವರಿ 30ರಂದು ಹಿರಿಯಡಕದ ಶ್ರೀ ವೀರಭದ್ರ ದೇವಸ್ಥಾನದ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪುಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ವಿಧಾನಸಭೆ ಸಭಾಪತಿ ಯು.ಟಿ. ಖಾದರ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಜಯಂತ ರಾವ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಉಮಾಶ್ರೀ, ವಕ್ತಾರ ನಿಕೇತ್ ರಾಜ್ ಮೌರ್ಯ, ಮಾಜಿ ಸಂಸದ ಕೆ. ಜಯಪಕಾಶ ಹೆಗ್ಡೆ, ಸುಧೀರ್ ಮರೋಳಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಮಾರು 5 ಸಾವಿರ ಮಂದಿ ಸೇರುವ ನಿರೀಕ್ಷೆ ಇದ್ದು, ಸಭಾಕಾರ್ಯಕ್ರಮಕ್ಕೂ ಮೊದಲು ದೇವಾಡಿಗ ಸಭಾಭವನದಿಂದ ಸಮಾವೇಶ ಸ್ಥಳದವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಸಮಾವೇಶದ ಸಂಚಾಲಕ ನಾಗೇಶ ಉದ್ಯಾವರ, ಕಾಪು ಉತ್ತರ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಸಂತೋಷ್‌ ಕುಲಾಲ್ ಪಕ್ಕಾಲು, ನಿತಿನ್ ಮತ್ತು ನವೀನ ಚಂದ್ರ ಸುವರ್ಣ ಇದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 hour ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago