ಉಡುಪಿ: 100 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧೀಜಿ ಭಾಗವಹಿಸಿದ್ದ ಸವಿನೆನಪಿಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಕಾಪು ದಕ್ಷಿಣ ಬ್ಲ್ಯಾಕ್ ಕಾಂಗ್ರೆಸ್ ಸಹಯೋಗದೊಂದಿಗೆ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಧೇಯವಾಕ್ಯದಡಿ “ಗಾಂಧಿ ಭಾರತ ಬೃಹತ್ ಸಮಾವೇಶ”ವನ್ನು ಜನವರಿ 30ರಂದು ಹಿರಿಯಡಕದ ಶ್ರೀ ವೀರಭದ್ರ ದೇವಸ್ಥಾನದ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪುಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ವಿಧಾನಸಭೆ ಸಭಾಪತಿ ಯು.ಟಿ. ಖಾದರ್ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಜಯಂತ ರಾವ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಉಮಾಶ್ರೀ, ವಕ್ತಾರ ನಿಕೇತ್ ರಾಜ್ ಮೌರ್ಯ, ಮಾಜಿ ಸಂಸದ ಕೆ. ಜಯಪಕಾಶ ಹೆಗ್ಡೆ, ಸುಧೀರ್ ಮರೋಳಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಮಾರು 5 ಸಾವಿರ ಮಂದಿ ಸೇರುವ ನಿರೀಕ್ಷೆ ಇದ್ದು, ಸಭಾಕಾರ್ಯಕ್ರಮಕ್ಕೂ ಮೊದಲು ದೇವಾಡಿಗ ಸಭಾಭವನದಿಂದ ಸಮಾವೇಶ ಸ್ಥಳದವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಸಮಾವೇಶದ ಸಂಚಾಲಕ ನಾಗೇಶ ಉದ್ಯಾವರ, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ನಿತಿನ್ ಮತ್ತು ನವೀನ ಚಂದ್ರ ಸುವರ್ಣ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…