Featured

ಉಡುಪಿ : ಜ.8 ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ – vishwanews24

ಉಡುಪಿ : ಜ.8 ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ ಮೆರವಣಿಗೆ

ಉಡುಪಿ : ಪೊಡವಿಗೊಡೆಯ ಅನ್ನಬ್ರಹ್ಮ ಶ್ರೀಕೃಷ್ಣ ಮತ್ತು ಶ್ರೀ ಮುಖ್ಯಪ್ರಾಣ ದೇವರ ಪೂಜಾ ದ್ವೈವಾರ್ಷಿಕ ಪರ್ಯಾಯದ 502 ನೇ ವರ್ಷದ ಶುಭಸಂದರ್ಭದಲ್ಲಿ ಶ್ರೀ ಪುತ್ತಿಗೆ ಉಪೇಂದ್ರತೀರ್ಥ ಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರೊಡಗೂಡಿ ಶ್ರೀ ಮಧ್ವ ವಾದಿರಾಜರ ಸತ್ಸಂಪ್ರದಾಯದಂತೆ ಚತುರ್ಥ ಬಾರಿಗೆ ಜನವರಿ 18 ರ ಬೆಳಿಗ್ಗೆ ಸರ್ವಜ್ಞಪೀಠಾರೋಹಣ ಮಾಡಲಿದ್ದಾರೆ. ಆ ಪ್ರಯುಕ್ತ ಸ್ವಾಮೀಜಿಯವರು ಪರ್ಯಾಯ ಪೂರ್ವಭಾವಿಯಾಗಿ ದೇಶ-ವಿದೇಶಗಳಲ್ಲಿ ಸಂಚರಿಸಿ, ಪ್ರಸಿದ್ಧ 48 ತೀರ್ಥಕ್ಷೇತ್ರಗಳ ಮಂಡಲಯಾತ್ರೆ ಪೂರೈಸಿ ಜನವರಿ 8 ಸೋಮವಾರ ಉಡುಪಿಗೆ ಪುರಪ್ರವೇಶಗೈಯಲಿದ್ದಾರೆ.

ಸಾಂಪ್ರದಾಯಿಕ ಮೆರವಣಿಗೆ: ಜನವರಿ 8 ರಂದು ಅಪರಾಹ್ನ 3.30 ಗಂಟೆಗೆ ಜೋಡುಕಟ್ಟೆಯಿಂದ ಸಾಂಪ್ರದಾಯಿಕ ಮೆರವಣಿಗೆಯ ಮೂಲಕ ಶ್ರೀಮಠದ ಸಕಲ ಗೌರವಗಳೊಂದಿಗೆ ಶ್ರೀಪಾದರನ್ನು ಬರಮಾಡಿಕೊಳ್ಳಲಾಗುವುದು. ಪುರಪ್ರವೇಶ ಮೆರವಣಿಗೆಯು ಜೋಡುಕಟ್ಟೆ-ಕೆ.ಎಂ. ಮಾರ್ಗ-ತ್ರಿವೇಣಿ ವೃತ್ತ-ಸಂಸ್ಕೃತ ಕಾಲೇಜು ರಸ್ತೆ-ರಥಬೀದಿಯಾಗಿ ಸಾಗಿಬರಲಿದೆ. ಬಳಿಕ ಉಭಯ ಶ್ರೀಗಳು ಶ್ರೀ ಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ, ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆಯಲಿದ್ದಾರೆ. ಬಳಿಕ ಶ್ರೀಮಠವನ್ನು ಪ್ರವೇಶಿಸಲಿರುವ ಉಭಯ ಶ್ರೀಗಳು ರಥಬೀದಿಯ ‘ಆನಂದತೀರ್ಥ’ ವೇದಿಕೆಯಲ್ಲಿ ಸಂಜೆ 7 ಗಂಟೆಗೆ ಪೌರಸಮ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago