Featured

ಉಡುಪಿ : ಝೀಕಾ ವೈರಸ್ ಬಗ್ಗೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಝೀಕಾ ವೈರಸ್ ಬಗ್ಗೆ ಎಚ್ಚರವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಕೋರೊನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಕೇರಳದಲ್ಲಿ ಝೀಕಾ ವೈರಸ್ ಖಚಿತ ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದರೊಂದಿಗೆ , ಝೀಕಾ ವೈರಸ್ ಹರಡುವ ವಿಧಾನ, ರೋಗಲಕ್ಷಣಗಳ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದ್ದು ಹಾಗೂ ಇದನ್ನು ತಡೆಯುವ ನಿಟ್ಟನಲ್ಲಿ ಈ ಕೆಳಗಿನ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ತಿಳಿಸಿದ್ದಾರೆ.

ಹರಡುವ ವಿಧಾನ:

• ಡೆಂಗ್ಯೂ/ಚಿಕುಗುನ್ಯಾ,ವೆಸ್ಟ ನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಹೆಣ್ಣು ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಖಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ.

• ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿಮಯದ ಮೂಲಕವೂ ಹರಡುತ್ತದೆ.

• ಸದ್ಯ ಮಳೆಗಾಲ ಈ ವೈರಸ್ ಹರಡಲು ಅನುಕೂಲವಾದ ವಾತಾವರಣ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳ ಸಾಂದ್ರತೆ ಜಾಸ್ತಿ ಇರುತ್ತದೆ.ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ.

ರೋಗ ಲಕ್ಷಣಗಳು

ತೀವ್ರತರವಾದ ಜ್ವರ, ಮೈ-ಕೈ ನೋವು, ಕೀಲುಗಳಲ್ಲಿ ನೋವು, ದೇಹದ ಮೇಲೆ ಕೆಂಪು ರಕ್ತ ಮಿಶ್ರಿತ ಗುಳ್ಳೆಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣವಾಗಿದೆ. ರಕ್ತ ಹಾಗೂ ಮೂತ್ರವನ್ನು ಪರೀಕ್ಷಿಸಿದಾಗ ಈ ರೋಗದ ಸೋಂಕು ಇರುವುದು ಕಂಡುಬುತ್ತದೆ.

ಸoಭವಿಸಬಹುದಾದoತಹ ಅಪಾಯ:

• ಗರ್ಭಿಣಿಯರು ಝೀಕಾ ವೈರಸ್ ಸೋಂಕಿಗೆ ಒಳಗಾಗಿದ್ದರೆ ಗರ್ಭಪಾತವಾಗುವ ಸಾಧ್ಯತೆ ಇದೆ ಹಾಗೂ ಹುಟ್ಟಲಿರುವ ಮಗುವಿಗೂ ಕೂಡ ಸೋಂಕು ರವಾನೆಯಾಗಬಹುದಾಗಿದೆ.

• ಹುಟ್ಟುವ ಮಕ್ಕಳಲ್ಲಿ ಅಂಗಾಗ ನ್ಯೂನತೆ (ಮೈಕ್ರೋಸೆಫಲಿ -ಅಂದರೆ ಮಗುವಿನ ಮೆದುಳಿನ ಬೆಳವಣಿಗೆ ಕುಂಠಿತವಾಗುವುದು) ಕಾಣಿಸಿಕೊಳ್ಳುವ ಸಾಧ್ಯತೆಯೂ ಹೆಚ್ಚಾಗಿದೆ.

• ವಯಸ್ಕರಲ್ಲಿ ತೀವ್ರತರವಾದ ನರಗಳ ದೌರ್ಬಲ್ಯ (Guillain-barre syndrome) ವಿರಳವಾಗಿ ಕಾಣಿಸಿಕೊಳ್ಳಬಹುದು.

ರೋಗ ಲಕ್ಷಣಗಳು ಕಂಡು ಬಂದರೆ ಏನು ಮಾಡಬೇಕು:

• ಇದುವರೆಗೆ ಈ ಖಾಯಿಲೆಗೆ ಯಾವುದೇ ಲಸಿಕೆ ಕಂಡುಹಿಡಿದಿಲ್ಲ.

• ಸಾಕಷ್ಟು ದ್ರವ ಆಹಾರಗಳನ್ನು ಸೇವಿಸುವುದರ ಮೂಲಕ ನಿರ್ಜಲೀಕರಣವನ್ನು ತಡೆಯಬೇಕು.

• ಸಾಕಷ್ಟು ವಿಶ್ರಾಂತಿಯನ್ನು ಪಡೆಯಬೇಕು.

• ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದು.

ಸೊಳ್ಳೆಗಳ ಉತ್ಪತ್ತಿ ತಾಣಗಳು:

ಈ ಸೊಳ್ಳೆಗಳು ಹಗಲು ಹೊತ್ತು ಕಚ್ಚುತ್ತದೆ. ಡ್ರಮ್, ಬ್ಯಾರೆಲ್, ನೀರಿನ ತೊಟ್ಟಿ, ಏರ್ ಕೂಲರ್, ಅನುಪಯುಕ್ತ ಟೈರ್, ಒಡೆದ ಮಡಕೆ, ತೆಂಗಿನ ಚಿಪ್ಪು, ತಾರಸಿ ಮನೆಗಳ ಮೇಲ್ಚಾವಣಿ, ಘನತ್ಯಾಜ್ಯ ವಸ್ತುಗಳು, ಅಡಿಕೆ ತೋಟಗಳಲ್ಲಿ ಬಿದ್ದಿರುವ ಹಾಳೆಗಳು, ರಬ್ಬರ ತೋಟಗಳಲ್ಲಿ ರಬ್ಬರ ಸಂಗ್ರಹಿಸುವ ಕಫ್, ಹೂವಿನ ಕುಂಡ, ಇತ್ಯಾದಿಗಳಲ್ಲಿ ನೀರು ನಿಂತು ಈಡಿಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ.

ಸಾರ್ವಜನಿಕರ ಪಾತ್ರ:

• ಮನೆ ಪರಿಸರ, ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು.

• ಸೊಳ್ಳೆಗಳು ಪ್ರವೇಶಿಸದಂತೆ ಮನೆಯ ಕಿಟಕಿ ಬಾಗಿಲುಗಳಿಗೆ ಜಾಲರಿ ಅಳವಡಿಸುವುದು.

• ಹೊರಾಂಗಣದಲ್ಲಿ ಮಲಗುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು ಹಾಗೂ ವಿಶ್ರಾಂತಿ ಪಡೆಯುವಾಗ ಮತ್ತು ಮಲಗುವಾಗ ವಿಶೇಷವಾಗಿ ಗರ್ಭಿಣಿಯರು/ವಯಸ್ಕರು ಮತ್ತು ಮಕ್ಕಳು ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು ಉಪಯೋಗಿಸುವುದು.

• ನೀರಿನ ತೊಟ್ಟಿ/ಟ್ಯಾಂಕ್‌ನ್ನು ಕನಿಷ್ಟ ಪಕ್ಷ ವಾರಕ್ಕೊಮ್ಮೆಯಾದರೂ ಪೂರ್ತಿ ಖಾಲಿ ಮಾಡಿ ತಿಕ್ಕಿ ತೀಡಿ ತೊಳೆಯುವುದು.

• ಬಯಲಿನಲ್ಲಿ ತ್ಯಾಜ್ಯ ವಸ್ತುಗಳಾದ ಟೈರ್, ಎಳೆನೀರಿನಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹವಾಗದoತೆ ಎಚ್ಚರವಹಿಸಿವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು.

• ಸಾಧ್ಯವಾದಷ್ಟು ಮೈ ಮುಚ್ಚುವಂತೆ ಬಟ್ಟೆಯನ್ನು ಧರಿಸುವುದು.

• ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು. ಸೊಳ್ಳೆ ಕಚ್ಚದಂತೆ ಎಲ್ಲಾ ರೀತಿಯ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago