Featured

ಉಡುಪಿ: ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿಕೊಂಡರೆ ಹೆಚ್ಚಿನ ಲಾಭ ನೀಡುವುದಾಗಿ ಆನ್ ಲೈನ್ ಮೂಲಕ ವ್ಯಕ್ತಿಗೆ 3.4 ಲಕ್ಷ ರೂ. ವಂಚನೆ – vishwanews24

ಉಡುಪಿ: ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿಕೊಂಡರೆ ಹೆಚ್ಚಿನ ಲಾಭ ನೀಡುವುದಾಗಿ ಆನ್ ಲೈನ್ ಮೂಲಕ ವ್ಯಕ್ತಿಗೆ 3.4 ಲಕ್ಷ ರೂ. ವಂಚನೆ

ಉಡುಪಿ :ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿಕೊಂಡರೆ ಹೆಚ್ಚಿನ ಲಾಭ ನೀಡುವುದಾಗಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿನ ಸೂಡ ಗ್ರಾಮದ ನಿವಾಸಿಯಾಗಿರುವ ದಿಲೀಪ್(56) ಎಂಬವರು ಟೆಲಿಗ್ರಾಮ್ ಆಪ್ ನಲ್ಲಿ ಹೆಚ್ಚಿನ ಲಾಭದ ಉದ್ದೇಶದಿಂದ ಹಣ ಹಾಕಿ ಈಗ ಮೋಸ ಹೋದ ವ್ಯಕ್ತಿಯಾಗಿದ್ದಾರೆ.

ಇವರ ವಾಟ್ಸ್ ಪ್ ಗೆ ನಂಬರ್ ಗೆ ಟ್ರೇಡಿಂಗ್ ಟಾಸ್ಕ್ ಬಗ್ಗೆ ಸಂದೇಶವೊಂದು ಬಂದಿತ್ತು.

ತದನಂತರ ದಿಲೀಪ್ ಅವರು ಆ ನಂಬರನ್ನು ಸಂಪರ್ಕ ಮಾಡಿದಾಗ ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿದರೆ, ಹೆಚ್ಚಿನ ಲಾಭಾಂಶದ ನೀಡುವು ದಾಗಿ ನಂಬಿಸಿದ್ದರು.

ಅದರಂತೆ ಜೂ.18ರಂದು ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 3,44,200ರೂ. ಹಣವನ್ನು ಆನ್ ಲೈನ್ ಮೂಲಕ ದೂರುದಾರ ವ್ಯಕ್ತಿ ಜಮೆ ಮಾಡಿದ್ದರು.

ಆದರೆ ಆರೋಪಿಗಳು ಲಾಭಾಂಶವನ್ನು ನೀಡಿಲ್ಲ. ಮಾತ್ರವಲ್ಲ ಜಮೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿದ್ದಾರೆ ಎಂದು ದಿಲೀಪ್ ಅವರು ದೂರು ದಾಖಲಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

11 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago