ಉಡುಪಿ: ಟೆಲಿಫೋನ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ – VIshwanews24

Featured, ಉಡುಪಿ

ಉಡುಪಿ: ಟೆಲಿಫೋನ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ – VIshwanews24

ಬಾರ್ಕೂರು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ.

ಬಾರ್ಕೂರಿನಿಂದ ಮಂದಾರ್ತಿ ಹೋಗುವ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಕ್ಕದ ಹಾಡಿಯೊಳಗೆ ನುಗ್ಗಿ ಟೆಲಿಫೋನ್ ಕಂಬಕ್ಕೆ ಗುದ್ದಿದೆ. ಅಪಘಾತದ ತೀವ್ರತೆಗೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಪೊಲೀಸರು, ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿ ರಾಜೇಶ್ ಭಟ್ 4 ದಿನ ಪೊಲೀಸ್ ಕಸ್ಟಡಿಗೆ – Vishwanews24