Featured

ಉಡುಪಿ : ಟೋಲ್‍ಗೇಟ್‍ ಅಂಬುಲೆನ್ಸ್ ಅಪಘಾತ ಪ್ರಕರಣ : ಟೋಲ್‍ನಲ್ಲಿ ಮಲಗಿದ್ದ ಹಸು ತಪ್ಪಿಸಲು ಹೋಗಿ ಡಿಕ್ಕಿ : ಅಂಬುಲೆನ್ಸ್ ಚಾಲಕ – VIshwanews24

ಉಡುಪಿ : ಟೋಲ್‍ಗೇಟ್‍ ಅಂಬುಲೆನ್ಸ್ ಅಪಘಾತ ಪ್ರಕರಣ : ಟೋಲ್‍ನಲ್ಲಿ ಮಲಗಿದ್ದ ದನ ತಪ್ಪಿಸಲು ಹೋಗಿ ಡಿಕ್ಕಿ : ಅಂಬುಲೆನ್ಸ್ ಚಾಲಕ

ಉಡುಪಿ: ಟೋಲ್‍ನಲ್ಲಿ ಹಸು ಮಲಗಿದ್ದೇ ಅಂಬುಲೆನ್ಸ್ ಅಪಘಾತಕ್ಕೆ ಕಾರಣ ಎಂದು ಚಾಲಕ ರೋಷನ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಅಂಬುಲೆನ್ಸ್ ಪಲ್ಟಿಯಾದ ಹಿನ್ನೆಲೆ ನಾಲ್ವರು ಸಾವನ್ನಪ್ಪಿದ್ದರು. ಸದ್ಯ ಘಟನೆ ವೇಳೆ ಗಾಯಗೊಂಡಿರುವ ಟೋಲ್ ಸಿಬ್ಬಂದಿ ಹಾಗೂ ಇತರ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಈ ನಡುವೆ ಆಂಬುಲೆನ್ಸ್ ಚಾಲಕ ರೋಷನ್ ಆಂಬುಲೆನ್ಸ್‍ಗೆ ಅಡ್ಡಲಾಗಿ ದನ ಬಂದಿದ್ದೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ನಾನು ಉಡುಪಿಯ ಆದರ್ಶ ಆಸ್ಪತ್ರೆಗೆ ರೋಗಿ ಒಬ್ಬರನ್ನು ಶಿಫ್ಟ್ ಮಾಡುತ್ತಿದ್ದೆ. ಶಿರೂರಿನಲ್ಲಿ ಫಸ್ಟ್ ಗೇಟ್ ಸೆಕೆಂಡ್ ಗೇಟ್ ಸಿಗುತ್ತದೆ. ಎಮರ್ಜೆನ್ಸಿ ಲೈನ್‍ನಲ್ಲಿ ಫಸ್ಟ್ ಗೇಟ್ ತೆಗೆದಿದ್ದಾರೆ. ಸೆಕೆಂಡ್ ಗೇಟ್ ತೆಗೆಯುವಾಗ ಅಡ್ಡಲಾಗಿ ದನ ಮಲಗಿತ್ತು. ಆಗ ನನಗೆ ಏನು ಮಾಡಲು ಸಾಧ್ಯವಾಗಲಿಲ್ಲ. ದನ ಮತ್ತು ಇಬ್ಬರು ಟೋಲ್ ಸಿಬ್ಬಂದಿ ಅಲ್ಲಿಯೇ ಇದ್ದರು. ಹೀಗಾಗಿ ಅಪಘಾತವಾಗಿ ವಾಹನ ಪಲ್ಟಿ ಆಗುತ್ತಿತ್ತು. ಈ ಭಯದಿಂದ ನಾನು ಹಿಂದುಗಡೆ ಬ್ರೇಕ್ ಹೊಡೆದ್ದರಿಂದ ಅಪಘಾತವಾಯಿತು ಎಂದಿದ್ದಾರೆ.

ಹೊನ್ನಾವರದಿಂದ ಕುಂದಾಪುರಕ್ಕೆ ಬರುತ್ತಿದ್ದ ಅಂಬುಲೆನ್ಸ್, ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಒವರ್ ಸ್ಪೀಡ್ ಅಂಬ್ಯುಲೆನ್ಸ್:-ಬೈಂದೂರು ಟೋಲ್ ಕಂಬಕ್ಕೆ ಡಿಕ್ಕಿ-ಮೂವರು ಗಂಭೀರ-ಒರ್ವ ಚಿಂತಾಜನಕ-ಭೀಕರ ದೃಶ್ಯಾ ಸಿಸಿ ಕೇಮಾರದಲ್ಲಿ‌ ಸೆರೆ vishwanews24👇
https://fb.watch/enFak961yv/

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago