Featured

ಉಡುಪಿ : ಟ್ಯಾಬ್ಲೆಟ್ ಪಿಸಿ ಗಳಿಂದ ಆನ್‌ಲೈನ್ ವಿದ್ಯಾಭ್ಯಾಸಕ್ಕೆ ಅನುಕೂಲ : ರಘುಪತಿ ಭಟ್ – vishwanews24

ಉಡುಪಿ : ಟ್ಯಾಬ್ಲೆಟ್ ಪಿಸಿ ಗಳಿಂದ ಆನ್‌ಲೈನ್ ವಿದ್ಯಾಭ್ಯಾಸಕ್ಕೆ ಅನುಕೂಲ : ರಘುಪತಿ ಭಟ್ – vishwanews24

ಉಡುಪಿ : ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಉದ್ದೇಶದಿಂದ, ಸರಕಾರವು ಎಲ್ಲಾ ಸರಕಾರಿ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಕೂಲವಾಗಲಿದೆ. ಈ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಿರುವುದು ಅಭಿನಂದನೀಯ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಅವರು ಇಂದು ಅಜ್ಜರಕಾಡು ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕಾಲೇಜು ಶಿಕ್ಷಣ ಇಲಾಖೆ ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಮತ್ತು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ಮಾರ್ಟ್ಕ್ಲಾಸ್ ರೂಂಗಳ ಉದ್ಘಾಟನೆ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ.ಸಿ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಆಸಕ್ತಿಯಿಂದ ತಮ್ಮöನ್ನು ತೊಡಗಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ. ಆದರೆ ಇತ್ತೀಚಿನ ಯುವಜನರು ಸ್ಮಾರ್ಟ್ ಫೋನ್‌ಗಳನ್ನು ಸದುದ್ದೇಶಕ್ಕೆ ಬಳಸಿಕೊಳ್ಳದೇ ದುರುಪಯೋಗ ಪಡಿಸಿಕೊಂಡು ತಮ್ಮ ಭವಿಷ್ಯವನ್ನೇ ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸರ್ಕಾರದಿಂದ ಉಚಿತವಾಗಿ ದೊರೆತ ಈ ಟ್ಯಾಬ್ಲೆಟ್‌ಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿ ಇತರರಿಗೆ ಮಾದರಿಯಾಗಬೇಕು ಎಂದರು.

ಕೊರೋನಾದ ನಿಮಿತ್ತವಾಗಿ ಎಲ್ಲಾ ಶಾಲಾ – ಕಾಲೇಜುಗಳು ಮುಚ್ಚಲ್ಪಟ್ಟಿರುವುದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದAತೆ ತಡೆಯಲು ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅನುಕೂಲವಾಗುವಂತೆ, ಕೋವಿಡ್ ಲಸಿಕಾ ಅಭಿಯಾನವನ್ನು ಆರಂಭಿಸಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ಲಸಿಕೆ ಪಡೆದು ಶಾಲಾ- ಕಾಲೇಜುಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ ಎಂದರು.

ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಹೆಗ್ಡೆ ಸ್ವಾಗತಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣ ಸೌಲಭ್ಯಗಳು ದೊರಕುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದ್ದು, ಈ ಟ್ಯಾಬ್ಲೆಟ್‌ಗಳಿಗೆ ಸಿಮ್ ಅಳವಡಿಸುವುದರ ಮೂಲಕ ಇಂಟರ್‌ನೆಟ್ ಸಂಪರ್ಕ ಕಲ್ಪಿಸಿ, ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ – ಉಡುಪಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶಪಾಲ್ ಸುವರ್ಣ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು, ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ವಂದಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

16 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago