ಉಡುಪಿ : ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇತ್ತೀಚೆಗೆ ಟ್ಯಾಬ್ಲೋದಲ್ಲಿ ದೈವ ವೇಷ ಧರಿಸಿದ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತವಾಗಿ ವೇಷಧಾರಿಗಳು ದೈವಾರಾಧಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ ಹಾಗೂ ಪರಿವಾರ ದೈವ ಸಾನಿಧ್ಯದಲ್ಲಿ ದೈವ ವೇಷ ಧರಿಸಿದ್ದ ನಿತೀನ್ ಪೂಜಾರಿ ಕ್ಷಮೆಯಾಚಿಸಿದ್ದಾರೆ.
ಕೊರಗಜ್ಜ ಹಾಗೂ ಇತರೆ ದೈವ ವೇಷ ಧರಿಸಿ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಟ್ಯಾಬ್ಲೋ ಸಂಚರಿಸತೊಡಗಿದ್ದಾಗ ದೈವ ವೇಷದಾರಿಗಳಿದ್ದ ಟ್ಯಾಬ್ಲೋವನ್ನು ದೈವರಾಧಕರು ತಡೆದಿದ್ದರು.
ತದನಂತರ ಸಾಮಾಜಿಕ ಜಾಲತಾಣದಲ್ಲಿಯೂ ಈ ವಿಚಾರ ಅನೇಕ ಆಸ್ತಿಕರ ವಿರೋಧಕ್ಕೆ ಕಾರಣವಾಗಿತ್ತು. ಈ ಕಾರಣದಿಂದ ಸಾನಿಧ್ಯದಲ್ಲಿ ಅಖಿಲ ಭಾರತ ದೈವಾರಾಧಕರ ಒಕ್ಕೂಟ ಹಾಗೂ ಪಾಣಾರ ಯಾನೆ ನಲಿಕೆ ಸಂಘದ ಸದಸ್ಯರ ಸಮ್ಮುಖದಲ್ಲಿ ವೇಷಧಾರಿ ನಿತೀನ್ ಪೂಜಾರಿಕ್ಷಮೆಯಾಚಿಸಿ ತಪ್ಪು ಕಾಣಿಕೆ ಹಾಕಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…