ಉಡುಪಿ: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರನೋರ್ವ ಟ್ರಕ್ ನ ಚಕ್ರದಡಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಮೃತ ದುರ್ದೈವಿಯನ್ನು ದೆಂದೂರುಕಟ್ಟೆಯ ನಿವಾಸಿ ಪ್ರದೀಪ (38) ಎಂದು ಗುರುತಿಸಲಾಗಿದೆ.
ಟ್ರಕ್ ಬೈಕ್ ಸವಾರನನ್ನು ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಎಳೆದುಕೊಂಡು ಹೋಗಿದೆ. ಅಪಘಾತದ ರಭಸಕ್ಕೆ ಮೃತ ಸವಾರನ ತಲೆ ಭಾಗವು ಛಿದ್ರಗೊಂಡಿದೆ.
ಪ್ರದೀಪ್ ಅಂಬಲಪಾಡಿ ಸುರಭಿ ಅಟೋಮೊಬೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಉಡುಪಿ ಸಂಚಾರಿ ಪೋಲಿಸರು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ನೆರವಾದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…