Featured

ಉಡುಪಿ: ಟ್ವೀಟ್ ವಿವಾದ – ಡಾ. ಕೀರ್ತನ್ ಉಪಾಧ್ಯಾಯ ಸ್ಪಷ್ಟನೆ – vishwanews24

ಉಡುಪಿ: ಟ್ವೀಟ್ ವಿವಾದ – ನನ್ನ ಎಕ್ಸ್  ಖಾತೆಯನ್ನು ಹ್ಯಾಕ್ ಮಾಡಲಾಗಿದೆ : ಡಾ. ಕೀರ್ತನ್ ಉಪಾಧ್ಯಾಯ ಸ್ಪಷ್ಟನೆ

ಉಡುಪಿ: ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯ ಡಾ. ಕೀರ್ತನ್ ಉಪಾಧ್ಯಾಯ ಅವರ ಎಕ್ಸ್ ಖಾತೆಯಿಂದ ಮಾಡಿದ ಟ್ವೀಟ್ ವಿವಾದವನ್ನು ಸೃಷ್ಟಿಸಿದೆ. ಇದೀಗ ಅವರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಡಾ. ಕೀರ್ತನ್ ತಿಳಿಸಿದ್ದಾರೆ.

ಜುಲೈ 13 ರಂದು, ಡಾ.ಕೀರ್ತನ್ ಅವರನ್ನು ಎಕ್ಸ್ ನಲ್ಲಿ ಒಬ್ಬರು, “ನೀವು ಈ ಪ್ರಪಂಚದಿಂದ ಒಂದು ವಿಷಯವನ್ನು ತೆಗೆದುಹಾಕಲು ಬಯಸಿದರೆ, ಅದು ಏನು?” ಎಂದು ಪ್ರಶ್ನಿಸಿದ್ದಾರೆ. ಆ ಪ್ರಶ್ನೆಗೆ ಡಾ. ಕೀರ್ತನ್ ಉಪಾಧ್ಯಾಯ ಅವರು “ಮುಸ್ಲಿಂ ಸಮುದಾಯ” ಎಂದು ಉತ್ತರಿಸಿದ್ದಾರೆ. ಆ ಉತ್ತರವೇ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಇದೀಗ ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಡಾ ಕೀರ್ತನ್ ಉಪಾಧ್ಯಾಯ ವಿರುದ್ಧ ಬಳಕೆದಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಲವು ಬಳಕೆದಾರರು ರಾಜ್ಯ ಡಿಜಿಪಿಯನ್ನು ‘ಎಕ್ಸ್’ ನಲ್ಲಿ ಟ್ಯಾಗ್ ಮಾಡಿದ್ದು, ಇಂತಹ ವಿವಾದಾತ್ಮಕ ಟ್ವೀಟ್ ಮಾಡಿರುವ ವೈದ್ಯರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆದರೆ ಡಾ.ಕೀರ್ತನ್ ಅವರ ಎಕ್ಸ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಕ್ ಮಾಡಿದಾತ ಈ ರೀತಿಯ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಈ ಎಲ್ಲಾ ಘಟನೆಯ ಬಳಿಕ ಡಾ ಕೀರ್ತನ್ ಅವರು ಕೂಡ ಟ್ವೀಟ್ ಮಾಡಿದ್ದು, “ಕೆಲವು ತಿಂಗಳ ಹಿಂದೆ ನಾನು ಟ್ವಿಟರ್ ಬಳಸುವುದನ್ನು ನಿಲ್ಲಿಸಿದ್ದೆ, ಯಾವುದೋ ಅನಗತ್ಯ ಪೋಸ್ಟ್ ಮಾಡಲಾಗಿದೆ ಎಂದು ನನಗೆ ತಿಳಿಯಿತು. ಯಾರೋ ನನ್ನ ಖಾತೆಯನ್ನು ಬಳಸುತ್ತಿದ್ದಾರೆ, ನಾನು ನನ್ನ ಪಾಸ್‌ವರ್ಡ್ ಲಾಗಿನ್ ವಿವರಗಳನ್ನು ಮತ್ತು ಖಾತೆಗೆ ಸಂಬಂಧಿಸಿದ ಎಲ್ಲವನ್ನೂ ಬದಲಾಯಿಸಿದ್ದೇನೆ. ನನ್ನ ಖಾತೆಯನ್ನು ಹ್ಯಾಕ್ ಮಾಡಲಾಗಿದೆ” ಎಂದು ಸ್ಪಷ್ಟ ಪಡಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago