Featured

ಉಡುಪಿ: ಡಾ.ಎ. ವಿ ಬಾಳಿಗ ಆಸ್ಪತ್ರೆಯಲ್ಲಿ 30ನೇ ಉಚಿತ ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ – Vishwanews24

ಉಡುಪಿ: ಡಾ.ಎ. ವಿ ಬಾಳಿಗ ಆಸ್ಪತ್ರೆಯಲ್ಲಿ 30ನೇ ಉಚಿತ ಮದ್ಯವ್ಯಸನ ವಿಮುಕ್ತಿ ಶಿಬಿರ ಉದ್ಘಾಟನೆ

ಉಡುಪಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಮಲಾ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ.ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಸಂಯುಕ್ತಾಶ್ರಯದಲ್ಲಿ “ನಶಾ ಮುಕ್ತ ಭಾರತ ಅಭಿಯಾನ”ದ ಪ್ರಾಯೋಜಕತ್ವದಲ್ಲಿ, 30ನೇ ಉಚಿತ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರ ವಸತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮವು ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿಯಲ್ಲಿ ನಡೆಯಿತು.
ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಶಿಬಿರಾರ್ಥಿಗಳಿಗೆ ಮತ್ತು ಅವರ ಕುಟುಂಬದವರಿಗೆ ಈ ಶಿಬಿರದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದ ಅತಿಥಿಗಳಾಗಿ ಶರ್ಮಿಳಾ ಎಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲೆ. ಡಾ. ನಾಗಭೂಷಣ್ ಉಡುಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು.ವೀಣಾ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ. ಶ್ರೀಮತಿ ರತ್ನಾ, ಉಪ ನಿರ್ದೇಶಕರು, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಇವರೆಲ್ಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ. ಎ. ವಿ ಬಾಳಿಗಾ ಸಮೂಹ ಸಂಸ್ಥೆ ನಿರ್ದೇಶಕರು ಮತ್ತು ಮನೋವೈದ್ಯರಾದ ಡಾ. ಪಿ. ವಿ ಭಂಡಾರಿ ಅವರು ಕುಡಿತದ ಹಿಂತೆಗೆತದ ಚಿಹ್ನೆಗಳು ಮತ್ತು ಮಾನಸಿಕ ಸಮಸ್ಯೆಗಳು ಮತ್ತು ಅದರ ಚಿಕಿತ್ಸೆ ಮತ್ತು ಅನಾಮಿಕ ಅಮಲಿಗಳ ಸಭೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ನಶೆ ಮುಕ್ತ ಅಭಿಯಾನದ ಅಂಗವಾಗಿ ಯುವ ಜನತೆಯಲ್ಲಿ ಮದ್ಯ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತಾಗಿ ಜಾಗೃತಿ ಮೂಡಿಸುವ ಕಿರು ಚಿತ್ರವನ್ನು ಮಾನ್ಯ ಜಿಲ್ಲಾಧಿಕಾರಿ ಕೂರ್ಮರಾವ್. ಎಂ ಅವರು ಬಿಡುಗಡೆಗೊಳಿಸಿದರು.
ಕುಮಾರಿ ಚಂದ್ರಿಕಾ ಪ್ರಾರ್ಥಿಸಿದರು, ಡಾ.ಮಾನಸ್ ಸ್ವಾಗತಿಸಿದರು, ಡಾ.ವಿರೂಪಾಕ್ಷ ದೇವರಮನೆ ಅವರು ವಂದಿಸಿದರು, ಸೌಜನ್ಯ ಶೆಟ್ಟಿ ಮತ್ತು ಪದ್ಮ ರಾಘವೇಂದ್ರ ನಿರೂಪಿಸಿದರು.
Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago