ಉಡುಪಿ : ಡಾ. ಪ್ರಶಾಂತ್ ಶೆಟ್ಟಿಗೆ ಮುಖ್ಯಮಂತ್ರಿ ಪದಕ -Vishwanews24

Featured, ಉಡುಪಿ

ಉಡುಪಿ : ಡಾ. ಪ್ರಶಾಂತ್ ಶೆಟ್ಟಿಗೆ ಮುಖ್ಯಮಂತ್ರಿ ಪದಕ -Vishwanews24

ಉಡುಪಿ: ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ದೊರಕಿರುತ್ತದೆ.

2013 ರಿಂದ ಜಿಲ್ಲಾ ಸಮಾದೇಷ್ಟರಾಗಿ ಸೇವೆ ಸಲ್ಲಿಸುತ್ತಿರುವ ಇವರ ಸೇವಾ ಅವಧಿಯಲ್ಲಿ 150 ಮಂದಿ ಹೊಸ ಗೃಹ ರಕ್ಷಕರನ್ನು ಸೇರ್ಪಡೆ ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ, ಶ್ರೀಲಂಕಾ ಪ್ರಧಾನಿ ಭೇಟಿ ಹಾಗೂ ಪರ್ಯಾಯ ಸಂದರ್ಭದಲ್ಲಿ ಕಾನೂನು ಪಾಲನೆಯ ಜವಾಬ್ದಾರಿಯನ್ನು ನಿರ್ವಹಿಸಿರುತ್ತಾರೆ.

ಕಾಪುವಿನಲ್ಲಿ ಪ್ರಶಾಂತ ಆಸ್ಪತ್ರೆ ಹಾಗೂ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಅವರ ವೃತ್ತಿ ಸೇವೆ ಹಾಗೂ ಸಮಾಜ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದ್ದು, ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಪ್ರಶಸ್ತಿ ಸ್ವೀಕರಿಸಿರುತ್ತಾರೆ.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉಪಸ್ಥಿತರಿದ್ದರು.