Featured

ಉಡುಪಿ : ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ : ಕುಯಿಲಾಡಿ -Vishwanews24

ಉಡುಪಿ : ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ : ಕುಯಿಲಾಡಿ -Vishwanews24

ಉಡುಪಿ : ಅಂದು ಅಖಂಡ ಭಾರತದ ಪರಿಕಲ್ಪನೆಗೆ ಬೀಜ ಬಿತ್ತಿದವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು. ಅದನ್ನು ಇಂದು ಸಾಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮತ್ತು 35ಎ ರದ್ದುಗೊಳಿಸುವ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಅಖಂಡ ಭಾರತದ ಕನಸನ್ನು ನನಸಾಗಿಸಿದೆ. ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ದೂರದರ್ಶಿತ್ವದ ಚಿಂತನೆಗಳು, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜೂನ್ 23ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ! ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನುಡಿ ನಮನ ಸಲ್ಲಿಸಿದರು.

ಒಂದು ದೇಶದಲ್ಲಿ ಎರಡು ಸಂವಿಧಾನ ಎರಡು ರಾಷ್ಟ್ರ ಧ್ವಜ ಎರಡು ಪ್ರಧಾನಿ ಸಲ್ಲದು ಎಂಬ ನೀತಿಯನ್ನು ಪ್ರತಿಪಾದಿಸಿದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿರಬೇಕೆಂಬ ಚಿಂತನೆಯೊಂದಿಗೆ ನೆಹರೂ ಸಂಪುಟದಲ್ಲಿದ್ದ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ ದೇಶದ ಏಕತೆ ಮತ್ತು ಅಖಂಡತೆಗಾಗಿ ಹೋರಾಡಿದ ಅಪ್ಪಟ ದೇಶಪ್ರೇಮಿ.

ಅಧಿಕಾರ ಶಾಶ್ವತವಲ್ಲ, ಅಧಿಕಾರಕ್ಕಾಗಿ ದೇಶದ ಏಕತೆಯನ್ನು ಬಲಿಕೊಡುವುದಿಲ್ಲ ಎಂಬ ವಿಚಾರಧಾರೆಯನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಿ, ಅದರಿಂದಲೇ ಅವರ ಬಲಿದಾನವಾಗಿದ್ದು, ಡಾ! ಶ್ಯಾಮ ಪ್ರಸಾದ್ ಮುಖರ್ಜಿಯವರು ಎಂತಹ ಮಹಾನ್ ದೇಶ ಭಕ್ತ ಎಂಬುದನ್ನು ಅರಿಯಬಹುದಾಗಿದೆ ಎಂದು ಕುಯಿಲಾಡಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ , ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ನಯನಾ ಗಣೇಶ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಚಂದ್ರಶೇಖರ ಪ್ರಭು, ಉಡುಪಿ ನಗರ ಪ್ರಶಿಕ್ಷಣ ಸಂಚಾಲಕ ಲೋಕಯ್ಯ, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಶೆಟ್ಟಿ, ಮಾಯಾ ಕಾಮತ್, ಲೈಲಾ ಪ್ರಭಾವತಿ, ದಯಾಶಿನಿ ಪಾಂಡುರಂಗ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago