ಉಡುಪಿ : ದೇಶದ ಅಖಂಡತೆ ಮತ್ತು ಸಾರ್ವಭೌಮತೆ ಕಾಪಾಡಲು ಬಲಿದಾನಗೈದ ಅಪ್ರತಿಮ ದೇಶಭಕ್ತ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನದ ದಿನ ಜೂನ್ 23ರಿಂದ ಅವರ ಜನ್ಮ ದಿನ ಜುಲೈ 6ರ ವರೆಗೆ 14 ದಿನಗಳ ಪರ್ಯಂತ ಉಡುಪಿ ಜಿಲ್ಲೆಯಾದ್ಯಂತ ಪಕ್ಷದ ವತಿಯಿಂದ ಸಸಿ ನೆಡುವ ಕಾರ್ಯಕ್ರಮದ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳನ್ನು ಗೌರವಿಸಲಾಗುವುದು. ಈ ಬ್ರಹತ್ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ವ್ರಕ್ಷಾಪರೋಹಣ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಅಂಗವಾಗಿ ಜೂನ್ 23ರಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಸಸಿ ನೆಡುವ ಮೂಲಕ ವ್ರಕ್ಷಾಪರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರೈಲ್ವೆ ಇಂಜಿನಿಯರ್ ವೆಂಕಟೇಶ್, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಬಿಜೆಪಿ ಉಡುಪಿ ನಗರ ಪ್ರಶಿಕ್ಷಣ ವರ್ಗ ಸಂಚಾಲಕ ಲೋಕಯ್ಯ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುಜಾಲಾ ಸತೀಶ್, ಸುಧಾ ಪೈ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಮಾಯಾ ಕಾಮತ್, ದಯಾಶಿನಿ, ಲೈಲಾ ಪ್ರಭಾವತಿ, ರಶ್ಮಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…