ಉಡುಪಿ: ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ನೀಡುವ ‘ಲಯನ್ಸ್ ಕನ್ನಡ ರಾಜ್ಯೋತ್ಸವ’ ಪ್ರಶಸ್ತಿಯನ್ನು ಮಣಿಪಾಲ ಕೆಎಂಸಿಯ ನೇತ್ರ ತಜ್ಞೆ ಡಾ. ಸುಲತಾ ವಿ. ಭಂಡಾರಿ ಅವರಿಗೆ ಪ್ರದಾನ ಮಾಡಲಾಯಿತು.
ಲಯನ್ಸ್ ಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವರ್ವಾಡಿ ಪ್ರಶಸ್ತಿ ಪ್ರದಾನ ಮಾಡಿದರು. ಮನೋವೈದ್ಯ ಡಾ. ಪಿ.ವಿ. ಭಂಡಾರಿ ಕನ್ನಡ ರಾಜ್ಯೋತ್ಸವ ಆಶಯ ಭಾಷಣ ಮಾಡಿ, ಕನ್ನಡ ಭಾಷೆ ಮಾತನಾಡುವವರು ಹೆಮ್ಮೆ ಪಡಬೇಕಾದ ಅಗತ್ಯದ ಬಗ್ಗೆ ವಿವರಿಸಿದರು.
ಹಿರಿಯ ವೈದ್ಯ, ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಡಾ.ಎ. ರವೀಂದ್ರನಾಥ ಶೆಟ್ಟಿ, ಲಯನ್ಸ್ ಕಾರ್ಯದರ್ಶಿ ಅಲೆವೂರು ದಿನೇಶ್ ಕಿಣಿ, ಕೋಶಾಧಿಕಾರಿ ಲೂಯಿಸ್ ಲೋಬೊ ಲಯನ್ಸ್ ಲೇಡಿ ಕೌನ್ಸಿಲ್ ಅಧ್ಯಕ್ಷೆ ರೂಪಾ ಡಿ. ಕಿಣಿ, ಕಾರ್ಯದರ್ಶಿ ಚಂದ್ರಿಕಾ ರವೀಶ್, ಕೋಶಾಧಿಕಾರಿ ಮಮತಾ ಶೆಟ್ಟಿ, ಲಿಯೋ ಕ್ಲಬ್ ಕೋಶಾಧಿಕಾರಿ ಅಭಿನವ್ ಕಿಣಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…