Categories: ಉಡುಪಿ

ಉಡುಪಿ :ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ದ.ಕ. ಜಿಲ್ಲೆಯನ್ನು ಬಿಜೆಪಿ ಮುಕ್ತ ಮಾಡಲಾಗುವುದು : ಮಿಥುನ್ ರೈ  -Vishwanews24

ಗೋರಕ್ಷಕರು ಮೊದಲು ಅವರ ಮನೆಗಳಲ್ಲಿ ಗೋವುಗಳನ್ನು ಸಾಕಿ ಬಳಿಕ ಮಾತನಾಡಲಿ..

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಅವಿಭಜಿತ ದ.ಕ. ಜಿಲ್ಲೆಯನ್ನು ಬಿಜೆಪಿ

ಮುಕ್ತ ಮಾಡಲಾಗುವುದು : ಮಿಥುನ್ ರೈ  -Vishwanews24

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಗೋರಕ್ಷಣೆಯ ಬಗ್ಗೆ ಮಾತನಾಡುವ ಗೋರಕ್ಷಕರು ಮೊದಲು ಅವರ ಮನೆಗಳಲ್ಲಿ ಗೋವುಗಳನ್ನು ಸಾಕಿ ಬಳಿಕ ಮಾತನಾಡಲಿ ಎಂದು ದಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದರು.

ಅವರು ಬುಧವಾರ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡುತಿದ್ದರು.

ನಾವು ಕೇವಲ ಬಾಯಲ್ಲಿ ಗೋರಕ್ಷಣೆ ವಿಚಾರ ಮಾತನಾಡಲ್ಲ ಬದಲಾಗಿ ಸ್ವತಃ ಗೋವುಗಳನ್ನು ಸಾಕಿ ಪೋಷಿಸುತ್ತೇವೆ. ನನ್ನ ಮನೆಯಲ್ಲಿಯೇ ಹಲವಾರು ಗೋವುಗಳನ್ನು ಸಾಕಿದ್ದೇನೆ ಅಲ್ಲದೆ ದಾನ ಕೂಡ ಮಾಡಿದ್ದೇನೆ ಎಂದರು.

ಇಂದು ಕೊರೋನ ಎಂಬುದು ಹಣ ಮಾಡುವ ದಂಧೆಯಾಗಿ ಪರಿಣಮಿಸಿದೆ. ಈ ಮೂಲಕ ಇಡೀ ರಾಜ್ಯ ಅವ್ಯವಹಾರದ ಕೂಪವಾಗಿ ಬಿಟ್ಟಿದೆ. ಕೊರೋನ ಚಿಕಿತ್ಸಾ ಸಲಕರಣೆಗಳನ್ನು ದುಪ್ಪಟ್ಟು ಹಣ ನೀಡಿ ಖರೀದಿಸುವ ಮೂಲಕ ಭ್ರಷ್ಟಾ ಚಾರ ಎಸಗಲಾಗಿದೆ ಎಂದು ಆರೋಪಿಸಿದರು.

ಸರ್ಕಾರವು ಕಾರ್ಮಿಕರಿಗೆ ಊರಿಗೆ ತೆರಳಲು ವ್ಯವಸ್ಥೆ ಮಾಡದೇ ಅನ್ಯಾಯ ಎಸಗಿದ ಕಾಂಗ್ರೆಸ್ ವೋಟ್ ಕೇಳಲು ಪಕ್ಷ ಮಾತ್ರವಲ್ಲ, ಜನರ ಹಿತರಕ್ಷಣೆ ಮಾಡಿದ ಪಕ್ಷ ಕೂಡಾ ಆಗಿದೆ. ಸೋಲು ಜೀವನದ ಅಂತ್ಯವಲ್ಲ, ಅದು ಯಶಸ್ಸಿನ ಆರಂಭ. ಮುಂಬರುವ ದಿನಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಕ್ತವಾಗಲಿದೆ. ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಅವಿಭಜಿತ ದ.ಕ. ಜಿಲ್ಲೆಯನ್ನು ಬಿಜೆಪಿ ಮುಕ್ತ ಮಾಡಲಾಗುವುದು ಎಂದರು.

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪರಾಜ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್, ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ಸುಹೆಲ್ ಕಂದಕ್, ಅಬ್ದುಲ್ ಅಝೀಝ್, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರಮೇಶ್ ಹೆಗ್ಡೆ, ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಯೋಗೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್ ಸ್ವಾಗತಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago