ಉಡುಪಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವಂತೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದೆ.
ಕೆ ಜೆ ಜಾರ್ಜ್ ಅವರು ಅತ್ಯಂತ ಹಿರಿಯ ರಾಜಕಾರಣಿಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಅತ್ಯುನ್ನತವಾದ ಸೇವೆಯನ್ನು ನೀಡಿರುತ್ತಾರೆ. ಕ್ರೈಸ್ತ ಸಮುದಾಯಕ್ಕೆ ಈ ವರೆಗೆ ಇಂತಹ ಉನ್ನತ ಹುದ್ದೆ ಲಭಿಸಿಲ್ಲ ಈ ಬಾರಿಯಾದರೂ ಇಂತಹ ಅವಕಾಶ ಒದಗಿ ಬರಲಿದೆ ಎಂಬ ಆಶಾಭಾವನೆಯಿದ್ದು ಈ ನಿಟ್ಟಿನಲ್ಲಿ ಪಕ್ಷ ಗಮನ ಹರಿಸಬೇಕಾಗಿದೆ.
ಕರಾವಳಿಯಲ್ಲಿ ಕ್ರೈಸ್ತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಐವನ್ ಡಿಸೋಜಾ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಪರಿಷತ್ ಮುಖ್ಯ ಸಚೇತಕಾರಾಗಿ ಕ್ರೈಸ್ತ ಅಭಿವೃದ್ದಿ ನಿಗಮದಲ್ಲಿ ವಿವಿಧ ರೀತಿಯ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ,
ಕಾಂಗ್ರೆಸ್ ಪಕ್ಷದ ಗೆಲುವಿಗೆ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದ್ದು ರಾಜ್ಯದ 23 ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಸಮುದಾಯಕ್ಕೆ ಪ್ರತಿ ಬಾರಿ ಉನ್ನತ ಸ್ಥಾನಗಳನ್ನು ನೀಡುವಾಗ ಅವಕಾಶ ವಂಚಿತವಾಗಿದ್ದು ಈ ಬಾರಿ ಡಿ ಕೆ ಶಿವಕುಮಾರ್ ಅವರು ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಅವಕಾಶ ನೀಡುವ ಕೆಲಸವನ್ನು ಮಾಡಬೇಕು. ಈ ಮೂಲಕ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಅವರಿಗೆ ಸಚಿವ ಸ್ಥಾನವನ್ನು ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ಏಳಿಗೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಮೆಲ್ವಿನ್ ಆರಾನ್ಹಾ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…
ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…