Featured

ಉಡುಪಿ : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ ಪ್ರಕರಣ – ಆರೋಪಿ ಬಂಧನ – vishwanews24

ಉಡುಪಿ : ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ ಪ್ರಕರಣ – ಆರೋಪಿ ಬಂಧನ, 7ಲಕ್ಷ ರೂ. ನಗದು ವಶಕ್ಕೆ

ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89‌ ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು ಲಕ್ಷ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲಕರೊಬ್ಬರಿಗೆ ಸೆ.11ರಂದು ಅಪರಿಚಿತರು ಕರೆ ಮಾಡಿ, ಅಕ್ರಮ ಜಾಹೀರಾತು, ಸಂದೇಶ ಕಳುಹಿಸುವುದಕ್ಕೆ ನಿಮ್ಮ ಮೇಲೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ನಿಮ್ಮ ಮೇಲೆ ಅರೆಸ್ಟ್ ವಾರಂಟ್ ಆಗಿರುವುದಾಗಿ ಬೆದರಿಸಿದರು. ನಂತರ ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿ ವಾಟ್ಸಪ್ ವಿಡಿಯೋ ಕರೆ ಮಾಡಿ, ಮನಿ ಲಾಂಡ್ರಿಂಗ್ ಕೇಸ್‌ನಲ್ಲಿ ಭಾಗಿಯಾಗಿ ರುವುದಾಗಿ ತಿಳಿಸಿ ಆದಾಯದ ಮೂಲ ಪರಿಶೀಲನೆ ಮಾಡುವುದಾಗಿ ಹೇಳಿ, ವರ್ಚುವಲ್ ಅರೆಸ್ಟ್ ಮಾಡುವುದಾಗಿ ಬೆದರಿಸಿದರು. ಅದರಂತೆ ಸಂತೋಷ್ ಕುಮಾರ್‌ರನ್ನು ಬೆದರಿಸಿ ಅವರಿಂದ 89,00,000ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿ ಕೊಂಡು ವಂಚನೆ ಎಸಗಿದ್ದರು. ಈ ಬಗ್ಗೆ ಸಂತೋಷ ಕುಮಾರ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು ಕೇರಳ ರಾಜ್ಯ ಮತ್ತು ಮಹಾರಾಷ್ಟ ರಾಜ್ಯದ ಪುಣೆ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ಕಿರಣ್‌ನನ್ನು ಧಾರವಾಡದಲ್ಲಿ ಬಂಧಿಸಿ, ಒಂದು ಮೊಬೈಲ್ ಫೋನ್ ಹಾಗೂ 5 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿತು. ಈ ಹಿಂದೆ ಕೇರಳ ರಾಜ್ಯದ ಮೊಹಮ್ಮದ್ ನಿಶಾಮ್ ಸಿ.ಕೆ. ಎಂಬವರ ಖಾತೆಗೆ ಈ ಪ್ರಕರಣಕ್ಕೆ ಸಂಬಂಧಿಸಿ ಜಮೆ ಆಗಿರುವ 2 ಲಕ್ಷ ರೂ. ಹಣವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago