ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

Featured, ಉಡುಪಿ

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ

ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.

ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತಿದ್ದು, ಅಪಘಾತದ ರಭಸಕ್ಕೆ ತಡೆಬೇಲಿ ಹಾಗೂ ಬಸ್‌ನ ಮುಂಭಾಗ ಹಾನಿಗೊಳಗಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.

ಅಪಘಾತದ ಕಾರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply