ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.
ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತಿದ್ದು, ಅಪಘಾತದ ರಭಸಕ್ಕೆ ತಡೆಬೇಲಿ ಹಾಗೂ ಬಸ್‌ನ ಮುಂಭಾಗ ಹಾನಿಗೊಳಗಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.
ಅಪಘಾತದ ಕಾರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…