ಉಡುಪಿ: ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದುವರೆಗೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದು, ಇದೀಗ ಪರ್ಯಾಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಭಗವಾಧ್ವಜ ಹಾರಿಸಿದ ವಿಚಾರವನ್ನು ವಿವಾದವಾಗಿ ಸೃಷ್ಟಿಸಿ ಉಡುಪಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್ ಮಾಡುವ ಮೂಲಕ ಮತೀಯ ಶಕ್ತಿಗಳನ್ನು ಖುಷಿ ಪಡಿಸಲು ಮುಂದಾಗಿರುವುದು ದುರಂತ.
ಈ ಎಲ್ಲಾ ಬೆಳವಣಿಗೆಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಬಗ್ಗೆ ತೋರಿದ ನಿರ್ಲಕ್ಷ್ಯ ಧೋರಣೆಯೇ ಮುಖ್ಯ ಕಾರಣ. ಕಳೆದ ಹಲವು ದಶಕಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಉಡುಪಿಯ ಪರ್ಯಾಯೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯವಾಗಿದೆ. ಉಡುಪಿ ಜಿಲ್ಲೆಗೆ ಅತಿಥಿಯಂತೆ ಭೇಟಿ ನೀಡುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರು ಈ ಬಾರಿಯ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಿಲ್ಲ.
ಅಲ್ಲದೆ ಕರಾವಳಿ ಕರ್ನಾಟಕದ ನಾಡಹಬ್ಬ ಎನಿಸಿರುವ ಉಡುಪಿ ಪರ್ಯಾಯ ಮಹೋತ್ಸವ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಉಡುಪಿ ಜಿಲ್ಲೆಯ ಸಮಸ್ತ ಜನತೆಗೆ ಅಪಮಾನ ಮಾಡಿರುವುದು ವಾಸ್ತವ. ಕಾಂಗ್ರೆಸ್ ಮಾಡಿರುವ ಮನವಿಗೆ ಸರ್ಕಾರ ಮಣಿದು ಒಂದು ವೇಳೆ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಂಡರೆ ಜಿಲ್ಲಾ ಕಾಂಗ್ರೆಸ್‌ಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…