Featured

ಉಡುಪಿ : ಡಿ.1 ರಿಂದ ಜಿಲ್ಲೆಯ ಎಲ್ಲಾ ಟೋಲ್ ಗಳಲ್ಲಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ಅಳವಡಿಸಬೇಕು: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ,  : ಡಿಸೆಂಬರ್ 1 ರಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯ ಮಾಡಿ, ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ದ್ವಿಚಕ್ರ ವಾಹನ ಮತ್ತು ಆಟೋಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಗಳಲ್ಲಿ ಸಹ ಫಾಸ್ಟ್ ಟ್ಯಾಗ್ ಕಡ್ಡಾಯವಾಗಲಿದ್ದು, ಫಾಸ್ಟ್ ಟ್ಯಾಗ್ ಸೌಲಭ್ಯ ಪಡೆಯದ ವಾಹನಗಳು ನಿಗಧಿತ ಟೋಲ್ ಶುಲ್ಕದ ಎರಡು ಪಟ್ಟು ಟೋಲ್ ಶುಲ್ಕ ನೀಡಬೇಕಾಗುತ್ತದೆ ಎಂದು ತಿಳಿಸಿದ ಡಿಸಿ, ಫಾಸ್ಟ್ ಟ್ಯಾಗ್ ಸೌಲಭ್ಯವನ್ನು ಎಲ್ಲಾ ಟೋಲ್ ಗಳಲ್ಲಿ ಮತ್ತು ಸಂಬಂದಿಸಿದ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‍ಗಳಲ್ಲಿ ಪಡೆಯಬಹುದಾಗಿದೆ ಎಂದು ಹೇಳಿದರು.

ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಸುವುದರಿಂದ ಟೋಲ್ ಗಳಲ್ಲಿ ಹಣ ನೀಡದೇ ಸಂಚರಿಸಬಹುದಾಗಿದ್ದು, ಟೋಲ್ ಗಳಲ್ಲಿ ವಾಹನಗಳ ನಿಲುಗಡೆ ದಟ್ಟಣೆ ಕಡಿಮೆಯಾಗಲಿದೆ,ಪ್ರತಿ ಟೋಲ್ ಸಂಚಾರ ಕುರಿತು ಮೊಬೈಲ್ ಗೆ ಎಸ್.ಎಂ.ಎಸ್ ಸಹ ಬರಲಿದೆ ಎಂದು ಹೇಳಿದರು.

ಫಾಸ್ಟ್ ಟ್ಯಾಗ್ ಅಳವಡಿಸಿರುವ ವಾಹನ ಟೋಲ್ ಬಳಿ ಬಂದ ಕೂಡಲೇ ವಾಹನಕ್ಕೆ ಅಂಟಿಸಿರುವ ಸ್ಟಿಕರ್ ನ ಬಾರ್ ಕೋಡ್ ಸ್ಕ್ಯಾನ್ ಆಗಿ , ಸಂಬಂದಪಟ್ಟ ವಾಹನದ ಮಾಲೀಕನ ಬ್ಯಾಂಕ್ ಖಾತೆಯಿಂದ ನಿಗಧಿತ ಟೋಲ್ ಶುಲ್ಕ ಕಡಿತಗೊಳ್ಳುವ ಮೂಲಕ ಟೋಲ್ ಶುಲ್ಕ ಪಾವತಿಯಾಗಲಿದ್ದು, ಶೇ.2.5 ರಷ್ಟು ಕ್ಯಾಶ್ ಬ್ಯಾಕ್ ಸೌಲಭ್ಯ ಸಹ ಲಭಿಸಲಿದೆ.

ಫಾಸ್ಟ್ ಟ್ಯಾಗ್ ಅಳವಡಿಸಲು ವಾಹನಗಳ ಮಾಲೀಕರು ತಮ್ಮ ವಾಹನದ ಆರ್.ಸಿ. ಆಧಾರ್ ಕಾರ್ಡ್ ಮತ್ತು ಡ್ರೈವಿಂಗ್ ಲೈಸೆನ್ಸ್ ನೊಂದಿಗೆ ನೊಂದಣಿ ಮಾಡಬೇಕಿದ್ದು, ಈ ಸೌಲಭ್ಯವು ಎಲ್ಲಾ ಟೋಲ್ ಗಳಲ್ಲಿ ಮತ್ತು ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ ಗಳಾದ ಆಕ್ಸಿಸ್ ಬ್ಯಾಂಕ್, ಹೆ.ಚ್.ಡಿ.ಎಫ್.ಸಿ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಪೇಟಿಎಂ, ಎಸ್.ಬಿ.ಐ., ಬ್ಯಾಂಕ್ ಆಫ್ ಬರೋಡಾ, ಸಿಟಿ ಯೂನಿಯನ್ ಬ್ಯಾಂಕ್, ಈಕ್ವಟೋಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ , ಫೆಡರಲ್ ಬ್ಯಾಂಕ್ , ಐ.ಸಿ.ಐ.ಸಿ.ಐ ಬ್ಯಾಂಕ್ , ಐ.ಡಿ.ಎಫ್.ಸಿ ಬ್ಯಾಂಕ್ , ಇಂಡಸ್ ಲ್ಯಾಂಡ್ ಬ್ಯಾಂಕ್ , ಕರೂರು ವೈಶ್ಯ ಬ್ಯಾಂಕ್ , ಕೋಟಕ್ ಮಹೀಂದ್ರಾ ಬ್ಯಾಂಕ್ , ಪಂಜಾಬ್ ನ್ಯಾಷನಲ್ ಬ್ಯಾಂಕ್ , ಸೌತ್ ಇಂಡಿಯನ್ ಬ್ಯಾಂಕ್ ಗಳಲ್ಲಿ ಲಭ್ಯವಿದೆ.

ಏನಿದು ಫಾಸ್ಟ್ ಟ್ಯಾಗ್?
ಟೋಲ್ ಪ್ಲಾಜಾಗಳಲ್ಲಿ ಉಂಟಾಗುವ ಟ್ರಾಫಿಕ್ ಸಮಸ್ಯೆ ತಡೆಗಟ್ಟಲು ಕೇಂದ್ರ ಸರ್ಕಾರ ಫಾಸ್ಟ್ ಟ್ಯಾಗ್ ಸೌಲಭ್ಯವನ್ನು ಜಾರಿಗೆ ತಂದಿದೆ. ಫಾಸ್ಟ್ ಟ್ಯಾಗ್ ಪ್ರಿಪೇಯ್ಡ್ ಟ್ಯಾಗ್ ಸೌಲಭ್ಯವಾಗಿದ್ದು, ಟೋಲ್ ಶುಲ್ಕವನ್ನು ನಗದು ರಹಿತವಾಗಿ ಪಾವತಿಸಬಹುದಾಗಿದೆ.

ಶುಲ್ಕ ಪಾವತಿ ಹೇಗೆ?
ರೇಡಿಯೋ-ಫ್ರಿಕ್ವೆನ್ಸಿ ಐಡೆಂಟಿಫಿಕೇಶನ್(ಆರ್ ಎಫ್‍ಐಡಿ) ಆಧಾರಿತ ಫಾಸ್ಟ್ ಟ್ಯಾಗನ್ನು ವಾಹನದ ಮುಂಭಾಗದ ಗ್ಲಾಸ್‍ಗೆ ಅಂಟಿಸಲಾಗಿರುತ್ತದೆ. ಈ ಟ್ಯಾಗ್ ರೇಡಿಯೋ ಫ್ರಿಕ್ವೆನ್ಸಿ ಮೂಲಕ ಸ್ಕ್ಯಾನ್ ಆಗಲಿದ್ದು, ನಂತರ ಪ್ರಿಪೇಯ್ಡ್ ಅಥವಾ ಉಳಿತಾಯ ಖಾತೆಯಿಂದ ಹಣ ಕಡಿತವಾಗಲಿದೆ. ಆದರೆ ಬ್ಯಾಂಕ್ ಖಾತೆಯಲ್ಲಿ ಮುಂಗಡ ಹಣವನ್ನು ಇಟ್ಟಿರಬೇಕಾಗುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago