ಉಡುಪಿ: ಡಿ.16ರಿಂದ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸಾಹು ತಿಳಿಸಿದ್ದಾರೆ.
ಉಡುಪಿ ಅಂಬಲಪಾಡಿಯ ವಸಂತ ಮಂಟಪದಲ್ಲಿ ಇಂದು ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
1.2 ಕಿ.ಮೀ ಉದ್ದದ ಮೇಲ್ಸೇತುವೆ ಜತೆ ಅಂಡರ್ಪಾಸ್ ಕಾಮಗಾರಿ ನಡೆಯಲಿದೆ. 18 ತಿಂಗಳ ಪ್ರಾಜೆಕ್ಟ್ ಇದಾಗಿದ್ದು, 23.53 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಗೊಳ್ಳಲಿದೆ. ಕಾರ್ಲಾ ಕನ್ಸ್ ಕನ್ಟ್ರಕ್ಷನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದಾರೆ ಮಾಹಿತಿ ನೀಡಿದರು.
ಸ್ಥಳೀಯರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಯೋಜನೆಯ ಮಾಹಿತಿ ಪಡೆದುಕೊಂಡರು. ಈ ನಡುವೆ ಶೀಘ್ರ ಕಾಮಗಾರಿ ಆರಂಭಿಸಲೇಬೇಕು ಎಂಬ ಒತ್ತಾಯ ಕೇಳಿಬಂತು. ಕೆಲವು ಉದ್ಯಮಿಗಳ ಒತ್ತಡಕ್ಕೆ ಮಣಿದು ಕಾಮಗಾರಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದವು. ಇದನ್ನು ಅಧಿಕಾರಿ ಅಲ್ಲಗಳೆದರು.
ಜಿಲ್ಲಾಧಿಕಾರಿಗಳು ಸೂಚಿಸಿದಂತೆ ಸೋಮವಾರದಂದು ಕಾಮಗಾರಿ ಆರಂಭಗೊಳ್ಳಲೇ ಬೇಕು. ನಾಳೆಯೆ ಕಾಮಗಾರಿಯ ನೀಲಿ ನಕಾಶೆಯನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಅದಕ್ಕೆ ಅವರು ಒಪ್ಪಿಗೆ ಸೂಚಿಸಿದರು.
ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಹಲವು ಸಮಯಗಳ ಬೇಡಿಕೆ ಇದಾಗಿದೆ. 39 ಕೋಟಿಯ ಕಾಮಗಾರಿಯನ್ನು 23 ಕೋಟಿಗೆ ತೆಗೆದುಕೊಂಡಿದ್ದಾರೆ. ಕಡಿಮೆ ಹಣಕ್ಕೆ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ ಎಂದು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ, ಗುಣಮಟ್ಟದಲ್ಲಿ ಕಾಮಗಾರಿ ಮಾಡಬೇಕು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…