ಉಡುಪಿ : ಡಿ. 17ರಂದು ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್ ಒಕ್ಕೂಟದಿಂದ ಶಾಲಾ-ಕಾಲೇಜು ಬಂದ್ : ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ – Vishwanews24
ರಾಜ್ಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. 17 ರಂದು ಶಾಲಾ-ಕಾಲೇಜು ಬಂದ್ ಗೆ ಎನ್ ಎಸ್ ಯು ಐ ಕರೆ
ಉಡುಪಿ: ರಾಜ್ಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. 17ರಂದು ಶನಿವಾರ ರಾಜ್ಯವ್ಯಾಪಿ ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್ ಒಕ್ಕೂಟದಿಂದ ಕಾಲೇಜ್‌ಗಳನ್ನು ಬಂದ್ ಆಚರಿಸಲಾಗುವುದೆಂದು ಎನ್‌ಎಸ್‌ಯುಐನ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ತಿಳಿಸಿದರು.
ನಗರದಲ್ಲಿ ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿ ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣಕ್ಕೆ ಮುಂದಾಗಿವೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವಕ್ಕೆ ಗುಡ್‌ಬೈ ಹೇಳಿದ ಕೇನ್ ವಿಲಿಯಮ್ಸನ್ – Vishwanews24
ಈ ಹಿಂದೆ ಪರೀಕ್ಷೆಗಳ ಫಲಿತಾಂಶ ನಿಗದಿತ ಅವಧಿಗಿಂತ ಕೆಲವು ದಿನ ಮೊದಲು ಅಥವಾ ತಡವಾಗಿ ಬರುತ್ತಿದ್ದವು.ಆದರೆ ಈಗ ವರ್ಷವೇ ಕಳೆದರೂ ಪರೀಕ್ಷಾ ಫಲಿತಾಂಶ ಪ್ರಕಟಿಸುತ್ತಿಲ್ಲ. ಸರ್ಕಾರಿ ಕಾಲೇಜ್ ಗಳಲ್ಲೂ ಶುಲ್ಕ ಏರಿಸಲಾಗಿದೆ. ವಿದ್ಯಾರ್ಥಿ ವೇತನ ನೀಡುತ್ತಿಲ್ಲ ಎಂದರು.
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳೇ ಸ್ವಯಂ ಪ್ರೇರಿತರಾಗಿ ಸಮಸ್ಯೆ ಬಗೆಹರಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಸಂಘಟನೆಯೊಂದಿಗೆ ಕೈಜೋಡಿಸಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಪದಾಧಿಕಾರಿಗಳಾದ ಅನೀಶ್ ಪೂಜಾರಿ, ಶರತ್ ಕುಂದರ್, ಸೈಯ್ಯದ್ ಪುರ್ಕಾನ್ ರಕ್ಷಿತ್ ರಾಜ್, ಶ್ರೇಯಸ್ ಉಪಸ್ಥಿತರಿದ್ದರು.
ಬೆಂಗಳೂರಿಗರೇ..ನೇಪಾಳಿಗಳನ್ನ ಮನೆ ಕೆಲಸಕ್ಕೆ ಸೇರಿಸಿಕೊಳ್ಳೊ ಮುನ್ನ ಎಚ್ಚರ : ಪೊಲೀಸರ ಸಲಹೆ – Vishwanews24
