Featured

ಉಡುಪಿ: ಡಿ.2ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ – vishwanews24

ಉಡುಪಿ: ಡಿ.2ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಸಹಕಾರದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಡಿ. 2 ರಂದು ಬೆಳಿಗ್ಗೆ 10.30ಕ್ಕೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.

ಈ ಬಗ್ಗೆ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ 100 ರ ಸಂಭ್ರಮದ ಸವಿನೆನಪಿಗಾಗಿ ಈ ಕಾರ್ಯಕ್ರಮ ರಾಜ್ಯದ ವಿವಿದೆಡೆ ಆಯೋಜಿಸಲಾಗಿದೆ. ಆ ಪ್ರಯುಕ್ತ ಜಿಲ್ಲಾ ಪ್ರಚಾರ ಸಮಿತಿಗಳ ಆಶ್ರಯದಲ್ಲಿ ಆಯಾ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಡಿಸೆಂಬರ್ ತಿಂಗಳ ಕೊನೆಯವರೆಗೆ ಕರ್ನಾಟಕದ ಎಲ್ಲಾ 35 ಜಿಲ್ಲೆಗಳಲ್ಲೂ ನಡೆಸಲಾಗುವುದು ಎಂದರು.

ಗಾಂಧೀಜಿ, ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಮತ್ತು ಸಂವಿಧಾನದ ಕುರಿತು ಹಾಗೂ ಕೇಂದ್ರದ ಬಿಜೆಪಿ ಸರಕಾರ ಚುನಾವಣಾ ಆಯೋಗದ ಸಹಕಾರದಿಂದ ನಡೆಸುತ್ತಿರುವ ‘ಓಟ್ ಚೋರಿ’ ಬಗೆಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ 59000 ಬೂತ್ ಗಳಲ್ಲಿ ತಲಾ ಇಬ್ಬರಂತೆ 1,18,000 ಪ್ರತಿನಿಧಿಗಳನ್ನು ಆರಿಸಿ ಅವರಿಗೆ ಒಂದು ದಿನದ ತರಬೇತಿ ಕೂಡಾ ನೀಡಲಾಗುವುದು ಎಂದು ಅವರು ತಿಳಿಸಿದರು.

ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಅಲೆವೂರು ಹರೀಶ್ ಕಿಣಿ ಮಾತನಾಡಿ, ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಉಡುಪಿ ಜಿಲ್ಲೆಯ ಪ್ರಚಾರ ಸಮಿತಿಯ ಉಸ್ತುವಾರಿ ಕಿಮ್ಮನೆ ರತ್ನಾಕರ್, ಪ್ರಚಾರ ಸಮಿತಿಯ ಉಪಾಧ್ಯಕ್ಷ ಮುನೀರ್ ಜನ್ಸಾಲೆ, ಕೆ ಪಿ ಸಿ ಸಿ ವಕ್ತಾರ ಸುಧೀರ್ ಮರೋಳಿ, ಮುಖ್ಯ ಸಂಯೋಜಕ ಚಲನಚಿತ್ರ ನಟ, ನಿರ್ದೇಶಕ ಎಸ್ .ನಾರಾಯಣ್, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ .ಎ. ಗಫೂ‌ರ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ ಮುದ್ರಾಡಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರ್, ಮಾಜಿ ಶಾಸಕ ಗೋಪಾಲ್ ಪೂಜಾರಿ, ಮುಖಂಡರುಗಳಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ್ ಕುಮಾ‌ರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ಕೆ ಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಘಟಕಗಳ ಅಧ್ಯಕ್ಷರು, 7 ತಾಲೂಕು ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಚಾರ ಸಮಿತಿಯ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರುಗಳು ಉಪಸ್ಥಿತರಿರುವರು. ಸಮಾವೇಶದಲ್ಲಿ 1500ದಷ್ಟು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

 

ಸುದ್ದಿಗೋಷ್ಠಿಯಲ್ಲಿ ಪ್ರಚಾರ ಸಮಿತಿಯ ಕಾಪು ಬ್ಲಾಕ್ ಅಧ್ಯಕ್ಷ ಅಖಿಲೇಶ್ ಕೋಟ್ಯಾನ್, ಉಡುಪಿ ಬ್ಲಾಕ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ರಾಜೇಶ್ ಶೆಟ್ಟಿ ಹಾಗೂ ಜಿಲ್ಲಾ ಉಪಾಧ್ಯಕ್ಷ ದಿನಕರ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ -vishwanews24

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…

11 minutes ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

17 minutes ago

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

24 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago