Featured

ಉಡುಪಿ: ಡಿ.21ರಂದು ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಮರಾಠಿ ಸಮುದಾಯದಿಂದ ಅಭಿನಂದನಾ ಸಮಾರಂಭ – vishwanews24

ಉಡುಪಿ: ಡಿ.21ರಂದು ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಮರಾಠಿ ಸಮುದಾಯದಿಂದ ಅಭಿನಂದನಾ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮರಾಠಿ ಸೇವಾ ಸಂಘ, ಜಿಲ್ಲಾ ಮರಾಠಿ ಮಹಿಳಾ ವೇದಿಕೆ, ಜಿಲ್ಲಾ ಮರಾಠಿ ಯುವ ಸಂಘಟನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಡಿ.21ರ ಭಾನುವಾರದಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಕುಂಜಿಬೆಟ್ಟುವಿನ ಶ್ರೀ ತುಳಜಾ ಭವಾನಿ ಮರಾಠಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಮರಾಟಿ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ್ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭಕ್ಕೂ ಮೊದಲು ಅಂದು ಬೆಳಿಗ್ಗೆ 8:30ಕ್ಕೆ ರಾಜೇಶ್ ಪ್ರಸಾದ್ ಅವರನ್ನು ಪರ್ಕಳದ ಸ್ವಗೃಹದಿಂದ ವಾಹನ ಜಾಥಾದ ಮೂಲಕ ಕುಂಜಿಬೆಟ್ಟಿನ ಎಂ.ಜಿ.ಎಂ. ಮೈದಾನಕ್ಕೆ ಕರೆದುಕೊಂಡು ಬರಲಾಗುವುದು. ಅಲ್ಲಿಂದ ತೆರದ ವಾಹನದಲ್ಲಿ ಚೆಂಡೆ, ಕೊಂಬು ಹಾಗೂ ಪೂರ್ಣಕುಂಭ ಮೇಳದೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಸಮುದಾಯ ಭವನಕ್ಕೆ ಸ್ವಾಗತಿಸಲಾಗುವುದು‌ ಎಂದರು.

ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮರಾಠಿ ಸಮಾಜದ ಮುಖಂಡರಾದ ಉಮೇಶ್ ನಾಯ್ಕ್ ಚೇರ್ಕಾಡಿ, ಭುಜಂಗ್ ನಾಯ್ಕ್ ಇದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago