ಉಡುಪಿ: ಉಡುಪಿ ಜಿಲ್ಲಾ ಮರಾಠಿ ಸೇವಾ ಸಂಘ, ಜಿಲ್ಲಾ ಮರಾಠಿ ಮಹಿಳಾ ವೇದಿಕೆ, ಜಿಲ್ಲಾ ಮರಾಠಿ ಯುವ ಸಂಘಟನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಡಿ.21ರ ಭಾನುವಾರದಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಕುಂಜಿಬೆಟ್ಟುವಿನ ಶ್ರೀ ತುಳಜಾ ಭವಾನಿ ಮರಾಠಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಮರಾಟಿ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ್ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭಕ್ಕೂ ಮೊದಲು ಅಂದು ಬೆಳಿಗ್ಗೆ 8:30ಕ್ಕೆ ರಾಜೇಶ್ ಪ್ರಸಾದ್ ಅವರನ್ನು ಪರ್ಕಳದ ಸ್ವಗೃಹದಿಂದ ವಾಹನ ಜಾಥಾದ ಮೂಲಕ ಕುಂಜಿಬೆಟ್ಟಿನ ಎಂ.ಜಿ.ಎಂ. ಮೈದಾನಕ್ಕೆ ಕರೆದುಕೊಂಡು ಬರಲಾಗುವುದು. ಅಲ್ಲಿಂದ ತೆರದ ವಾಹನದಲ್ಲಿ ಚೆಂಡೆ, ಕೊಂಬು ಹಾಗೂ ಪೂರ್ಣಕುಂಭ ಮೇಳದೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಸಮುದಾಯ ಭವನಕ್ಕೆ ಸ್ವಾಗತಿಸಲಾಗುವುದು ಎಂದರು.
ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮರಾಠಿ ಸಮಾಜದ ಮುಖಂಡರಾದ ಉಮೇಶ್ ನಾಯ್ಕ್ ಚೇರ್ಕಾಡಿ, ಭುಜಂಗ್ ನಾಯ್ಕ್ ಇದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…