ಉಡುಪಿ: ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬೈಂದೂರಿನಲ್ಲಿ ಡಿ.25ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿರುವ ‘ಸಂಸದ್ ಖೇಲ್’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿ ಬಿ.ಎಲ್.ಸಂತೋಷ್ ಪಾಲ್ಗೊಂಡು, ಸಂಜೆ ಗಂಟೆ 5ಕ್ಕೆ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ’ಅಟಲ್ ಸ್ಮರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಡಿ.27ರಂದು ಸಂಜೆ 7ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ಕಾಪು ಮಂಡಲದ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಕಡಲ ಕಿನಾರೆಯಲ್ಲಿ ನಡೆಯಲಿರುವ ’ಕಾಪು ಕಡಲ ಪರ್ಬ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡಿ.28ರಂದು ಬಿಜೆಪಿ ಕಾರ್ಕಳ ಮಂಡಲದ ನೇತೃತ್ವದಲ್ಲಿ ಸಚ್ಚರಿಪೇಟೆಯಲ್ಲಿ ಪ್ರಧಾನಿ ಮೋದಿ ಅವರ ’ಮನ್ ಕೀ ಬಾತ್’ ಕಾರ್ಯಕ್ರಮದ ಅಧಿಕೃತ ನೇರ ಪ್ರಸಾರವನ್ನು ವೀಕ್ಷಿಸಲಿದ್ದಾರೆ.
ಡಿ.24ರಂದು ಸಂಜೆ 6ಗಂಟೆಗೆ ಬಿಜೆಪಿ ಉಡುಪಿ ನಗರ ಮಂಡಲದ ವತಿಯಿಂದ ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ನೇತೃತ್ವದಲ್ಲಿ ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಅಂತರ್ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ ’ಅಟಲ್ ಟ್ರೋಫಿ’ ನಡೆಯಲಿದೆ. ಬೆಳಿಗ್ಗೆ ಗಂಟೆ 9ರಿಂದ ಮಹಿಳಾ ವಿಭಾಗದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಕೂಟ ನಡೆಯಲಿದೆ.
ಡಿ.25ರಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಉಡುಪಿ ಗ್ರಾಮಾಂತರ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಬ್ರಹ್ಮಾವರ ನಂದಿಗುಡಿಯ ಬಳಿ ಪ.ಜಾ. ಸಮುದಾಯದ 14 ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ ಆಚರಣೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳ ಸಹಿತ ಜ.17ರಂದು ನಡೆಯುವ ಕರಾವಳಿಯ ನಾಡಹಬ್ಬ ’ಉಡುಪಿ ಶೀರೂರು ಮಠದ ಪರ್ಯಾಯೋತ್ಸವ’ದ ಸಂಬಂಧಿತ ಎಲ್ಲ ಕಾರ್ಯಕ್ರಮಗಳಲ್ಲಿ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸಹಿತ ಬಿಜೆಪಿ ಜಿಲ್ಲಾ ಪದಾಧಿಕಾರಿ ಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…