ನಗರ ಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ವಿಶೇಷ ಕ್ರಮ ವಹಿಸಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.
ನಗರ ಸಭೆ ಕಚೇರಿಯಲ್ಲಿ ಪ್ರಕರಣಗಳ ಗಂಭೀರತೆ ಗಮನಿಸಿ ಅಧಿಕಾರಿಗಳ ತುರ್ತು ಸಭೆ ನಡೆಸಿದ ಶಾಸಕರು ನಗರದಲ್ಲಿ ಕಟ್ಟಡ ಕಾಮಗಾರಿ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡುವ ಬಗ್ಗೆ ಎಲ್ಲಾ ಸಂಸ್ಥೆಗಳಿಗೆ ಸೂಚನೆ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ರಸ್ತೆ ಬದಿ ಗೂಡಂಗಡಿಗಳ ತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ನಿರಂತರ ಫಾಗಿಂಗ್ ಪ್ರಕ್ರಿಯೆ ಮಾಡುವಂತೆ ಹೇಳಿದರು.
ನಗರ ಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಹಾಗೂ ಗಣೇಶ ಚತುರ್ಥಿ ಮೆರವಣಿಗೆ ಸಾಗುವ ರಸ್ತೆಗಳ ಕಾಮಗಾರಿಗಳನ್ನು ತುರ್ತಾಗಿ ನಡೆಸಲು ಹೇಳಿದರು.
ಸಭೆಯಲ್ಲಿ ಪೌರಾಯುಕ್ತರಾದ ರಾಯಪ್ಪ, ನಗರ ಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್ ಅಂಚನ್, ಗಿರಿಧರ್ ಆಚಾರ್ಯ, ಶ್ರೀಮತಿ ಕಲ್ಪನ ಸುಧಾಮ, ಶ್ರೀಮತಿ ಗೀತಾ ಡಿ. ಶೇಟ್, ನಗರ ಸಭೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…