Featured

ಉಡುಪಿ ಡ್ರಗ್ಸ್ ಪ್ರಕರಣ : ಮಣಿಪಾಲದಲ್ಲಿ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್ ಗಳ ಬಂಧನ – Vishwanews24

ಉಡುಪಿ ಡ್ರಗ್ಸ್ ಪ್ರಕರಣ : ಮಣಿಪಾಲದಲ್ಲಿ ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್  ಗಳ ಬಂಧನ

ಉಡುಪಿ, : ಉಡುಪಿಯಲ್ಲಿ ಡ್ರಗ್ಸ್ ವಿರುದ್ಧ ಪೊಲೀಸ್ ಸಮರ ಮುಂದುವರಿದಿದ್ದು. ನಗರದ ಮಣಿಪಾಲ ಠಾಣಾಧಿಕಾರಿ ಮತ್ತು ತಂಡ ಹೆರ್ಗಾ ಗ್ರಾಮದ ಹೈ ಪಾಯಿಂಟ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದಿದೆ.

ಹೆರ್ಗಾ ಗ್ರಾಮದ ಹೈ-ಪಾಯಿಂಟ್‌ ಹೈಟ್ಸ್ ಅಪಾರ್ಟ್ಮೆಂಟ್‌ ಮೇಲೆ ದಾಳಿ ಮಾಡಿ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದ ಮಣಿಪಾಲದ ಎಂ.ಐ.ಟಿ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜೊತೆಯಿದ್ದ ಕಾರ್ಕಳದ ಫೆಡ್ಲರ್‌ ಆದ ಆದಿಲ್‌ (36) ಇವರನ್ನು ವಶಕ್ಕೆ ಪಡೆದು ಸುಮಾರು 300 ಗ್ರಾಂ ಗಾಂಜಾ ವಶಕ್ಕೆಪಡೆಯಲಾಗಿದೆ. ನಂತರ ಆದಿಲ್‌ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ–ಕಾರ್ಕಳ ರಸ್ತೆಯಲ್ಲಿ ನೌಶದ್‌(27) ಎಂಬಾತನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 1 ಕೆಜಿ 100 ಗ್ರಾಂ ಗಾಂಜಾವನ್ನು ಉಡುಪಿ ಜಿಲ್ಲಾ ಪೋಲಿಸರು ವಶ ಪಡಿಸಿದ್ದಾರೆ.

ವಿಚಾರಣೆಯಿಂದ ಆದಿಲ್‌ ಮತ್ತು ನೌಶದ್‌ ಎಂಬ ಗಾಂಜಾ ಪೆಡ್ಲರ್‌ಗಳು ಆತನ ಸ್ನೇಹಿತ ಇಮ್ರಾನ್‌ ಖಾನ್‌ ಯಾನೆ ಶಕೀಲ್‌ ಎಂಬುವವನು ಮೂಲತ: ಕಾರ್ಕಳ ನಿವಾಸಿಯಾಗಿದ್ದು, ಪ್ರಸ್ತುತ ಓಮನ್‌ ದೇಶದ ಮಸ್ಕತ್‌ನಲ್ಲಿ ವಾಸವಿದ್ದು ಅಲ್ಲಿಂದ ನೌಶದ್‌ ಮತ್ತು ಆದಿಲ್‌ನನ್ನು ಸಂಪರ್ಕಿಸಿ ಕಾಸರಗೋಡಿನ ಉಪ್ಪಳದಿಂದ ಗಾಂಜಾ ಮಾರಾಟ ಮಾಡುತ್ತಿರುವುದು ತನಿಖೆಯಿಂದ ಕಂಡು ಬಂದಿದೆ.

ಪ್ರಕರಣದ ಮುಖ್ಯ ಆರೋಪಿ ಇಮ್ರಾನ್‌ ಖಾನ್‌ ನ ಪತ್ತಗೆ ಉಡುಪಿ ಎಸ್ ಪಿ ಮತ್ತು ಮಣಿಪಾಲ ಪೊಲೀಸ್‌ ನಿರೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿ ಆತನ ವಿರುದ್ಧ ಲುಕ್‌ ಔಟ್‌ ನೋಟೀಸ್‌ (ಎಲ್‌ಓಸಿ) ಹೊರಡಿಸಲು ಸೂಚಿಸಿರುತ್ತಾರೆ. ಈ ಪ್ರಕರಣದಲ್ಲಿ ವೇಳೆ ಓರ್ವ ವಿದ್ಯಾರ್ಥಿ ಪೆಡ್ಲರ್‌ ಸೇರಿದಂತೆ ಮೂರು ಜನರನ್ನು ದಸ್ತಗಿರಿ ಮಾಡಿ ಸುಮಾರು 75 ಸಾವಿರ ಮೌಲ್ಯದ 1.5 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಮಾದಕ ವಸ್ತುಗಳ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago